ಧಾರವಾಡ: ಇಂದು ರಕ್ತಚಂದ್ರಗ್ರಹಣ ಇರುವುದರಿಂದ ಚಂದ್ರನಿಗೆ ಆವರಿಸುವ ಗ್ರಹಣವನ್ನು ಎಲ್ಲರೂ ವೀಕ್ಷಣೆ ಮಾಡಲಿ ಎಂಬ ಉದ್ದೇಶದಿಂದ ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರವು ಟೆಲಿಸ್ಕೋಪ್ ವ್ಯವಸ್ಥೆ ಮಾಡಿದೆ.
ಈಗಾಗಲೇ ಚಂದ್ರಗ್ರಹಣ ಆರಂಭಗೊಂಡಿದೆ. ರಾತ್ರಿ 11-30ರ ಸುಮಾರಿಗೆ ಪೂರ್ಣ ಚಂದ್ರಗ್ರಹಣವಾಗಲಿದೆ. ಅದನ್ನು ಕಣ್ತುಂಬಿಕೊಳ್ಳುವ ಉದ್ದೇಶದಿಂದ ಪ್ರಾದೇಶಿಕ ವಿಜ್ಞಾನ ಕೇಂದ್ರವು ಕೇಂದ್ರದ ಆವರಣದಲ್ಲಿ ಸಾರ್ವಜನಿಕರಿಗಾಗಿ ಟೆಲಿಸ್ಕೋಪ್‌ಗಳ ವ್ಯವಸ್ಥೆ ಮಾಡುವ ಮೂಲಕ ಚಂದ್ರಗ್ರಹಣದ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದೆ. ಈಗಾಗಲೇ ಅನೇಕರು ಟೆಲಿಸ್ಕೋಪ್ ಮುಖಾಂತರ ಚಂದ್ರಗ್ರಹಣ ವೀಕ್ಷಣೆ ಮಾಡಿದ್ದಾರೆ.
ಈಗಾಗಲೇ ಅನೇಕ ಸಾರ್ವಜನಿಕರು ಸ್ಥಳಕ್ಕೆ ಬಂದು ಟೆಲಿಸ್ಕೋಪ್ ಮುಖಾಂತರ ಚಂದ್ರಗ್ರಹಣ ವೀಕ್ಷಣೆ ಮಾಡುತ್ತಿದ್ದು, ಅದರ ಬಗ್ಗೆ ಪ್ರಾದೇಶಿಕ ವಿಜ್ಞಾನ ಕೇಂದ್ರದ ತಜ್ಞರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಒಟ್ಟಾರೆ ಇಂದು ರಕ್ತಚಂದ್ರಗ್ರಹಣದ ವೀಕ್ಷಣೆಗಾಗಿ ಪ್ರಾದೇಶಿಕ ವಿಜ್ಞಾನ ಕೇಂದ್ರವು ವಿಶೇಷ ಅವಕಾಶ ಮಾಡಿಕೊಟ್ಟಿದ್ದು, ಇದು ಅನೇಕ ಸಾರ್ವಜನಿಕರಿಗೆ ಉಪಯೋಗವಾಗಿದ್ದಂತೂ ಸುಳ್ಳಲ್ಲ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/09/2025 10:52 pm