", "articleSection": "Crime,Law and Order,Religion", "image": { "@type": "ImageObject", "url": "https://prod.cdn.publicnext.com/s3fs-public/474798-1757301105-youtubenew.02_04_02_04.Still1151.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vinay.Hegde" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ರಾಮ್ ರಹೀ ನಗರದಲ್ಲಿ ಭಾನುವಾರ ರಾತ್ರಿ ಗಣೇಶನ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರ ನಡ...Read more" } ", "keywords": "Maddur Ganesh immersion clash, Maddur Hindu Muslim stone pelting, communal clash Maddur, Ganesh Visarjan violence Maddur, Hindu Muslim tension Karnataka, Maddur news today, stone pelting during Ganesh immersion, Karnataka communal violence, Maddur latest updates, Ganesh festival clash Maddur", "url": "https://dashboard.publicnext.com/node" }
ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ರಾಮ್ ರಹೀ ನಗರದಲ್ಲಿ ಭಾನುವಾರ ರಾತ್ರಿ ಗಣೇಶನ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರ ನಡುವೆ ಕಲ್ಲುತೂರಾಟ ನಡೆದಿದೆ.
ಘಟನೆಯಿಂದಾಗಿ ಮದ್ದೂರು ಪಟ್ಟಣದಲ್ಲಿ ಪ್ರಕ್ಷುದ್ಧ ವಾತಾವರಣ ನಿರ್ಮಾಣವಾಗಿದೆ. ಒಟ್ಟು 8 ಮಂದಿಗೆ ಗಾಯಗಳಾಗಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದ 5ನೇ ಕ್ರಾಸ್‌ನಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಸೂಕ್ತ ಪೊಲೀಸ್ ಬಂದೋಬಸ್ತ್ ನಡುವೆ ಸಾಗುತ್ತಿತ್ತು. ರಾಮ್ ರಹೀಂ ನಗರದ ಮಸೀದಿ ಬಳಿ ಮೆರವಣಿಗೆ ಬಂದ ಸಂದರ್ಭ ರಾತ್ರಿ 8 ಗಂಟೆಯಲ್ಲಿ ಕಲ್ಲು ತೂರಾಟ ನಡೆಯಿತು. ಪ್ರತಿಯಾಗಿ ಕೆಲವೇ ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಮಸೀದಿ ಮೇಲೆಯೂ ಕಲ್ಲು ತೂರಾಟವಾಯಿತು. ಆಗ ಎರಡು ಕೋಮುಗಳ ಗುಂಪಿನ ನಡುವೆ ಘರ್ಷಣೆ ಉಂಟಾಗಿ, ತೀವ್ರ ಸ್ವರೂಪ ಪಡೆಯಿತು.
ಆ ಸಂದರ್ಭ ಎರಡು ಗುಂಪುಗಳ ಮುಖಂಡರು ಅಲ್ಲಿ ಜಮಾಯಿಸಿದರು. ಬಿಜೆಪಿ, ಆರ್.ಎಸ್.ಎಸ್., ಬಜರಂಗದಳ ಕಾರ್ಯಕರ್ತರು ಕೂಡ ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು.
ಗಣೇಶ ವಿಸರ್ಜನಾ ತಂಡದ ಕೆಲವು ಸದಸ್ಯರು ಪಟ್ಟಣದ ಪೇಟೆ ಬೀದಿಯ ಕೆಮ್ಮಣ್ಣು ನಾಲಾ ವೃತ್ತದ ಬಳಿಯಿರುವ ಮತ್ತೊಂದು ಮಸೀದಿ ಮುಂಭಾಗ ಧರಣಿ ನಡೆಸಿ, ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಮೊಳಗಿಸಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಪಡೆ, ಪೇಟೆ ಬೀದಿಯ ಎಲ್ಲ ಅಂಗಡಿಗಳ ಬಾಗಿಲು ಮುಚ್ಚಿಸಿದರು.
PublicNext
08/09/2025 08:42 am