ಉಡುಪಿ: ಆದರ್ಶ ಆಸ್ಪತ್ರೆ ಮತ್ತು ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆದಿವುಡುಪಿ ಆಂಗ್ಲಮಾಧ್ಯಮ ಶಾಲೆಯ ಸಹಶಿಕ್ಷಕಿ ಶ್ರೀಮತಿ ವೀಣಾ ಕೆ. ಇವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.
ಆದಿವುಡುಪಿ ಶಿಕ್ಷಣ ಸಂಸ್ಥೆಯಲ್ಲಿ ಹತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಶಾಲೆಯ ವಿವಿಧ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿ, ಹೆಚ್ಚಿನ ತರಬೇತಿಯನ್ನು ನೀಡಿ, ವಿದ್ಯಾರ್ಥಿಗಳು ಬಹುಮಾನಗಳನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದರಿಂದ ಹತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ವಿಷಯವನ್ನು ಅತ್ಯುತ್ತಮವಾಗಿ ಬೋಧಿಸುವ ಸಾಮರ್ಥ್ಯ ಹೊಂದಿದ್ದಾರೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಶಿಕ್ಷಕರಿಗಾಗಿ ಆಯೋಜಿಸಿದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿರುತ್ತಾರೆ.
Kshetra Samachara
08/09/2025 10:52 am