", "articleSection": "Politics,Infrastructure,Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1757316977-06~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾಪು: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಗ್ರಾಮದ ಶೋಭಾ ಪೂಜಾರಿ ಅವರ ಮನೆ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಹಾನಿಗೀಡಾಗಿತ್ತು. ...Read more" } ", "keywords": "Kapu,rain damaged house,MLA Gurme Suresh Shetty,visit,monsoon damage,house inspection,local news,Udupi,Karnataka", "url": "https://dashboard.publicnext.com/node" }
ಕಾಪು: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಗ್ರಾಮದ ಶೋಭಾ ಪೂಜಾರಿ ಅವರ ಮನೆ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಹಾನಿಗೀಡಾಗಿತ್ತು. ಈ ವೇಳೆ ಶೋಭಾ ಅವರಿಗೂ ಗಾಯಗಳಾಗಿದ್ದು, ಮಣಿಪಾಲ ಕೆ. ಎಂ. ಸಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶೋಭಾ ಅವರ ಮನೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆಗೆ ಗರಿಷ್ಠ ಪರಿಹಾರ ನೀಡುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದ ಶಾಸಕರು ಶೋಭಾ ಅವರ ಶಸ್ತ್ರಚಿಕಿತ್ಸೆಗೆ ನಾವೆಲ್ಲರೂ ಸೇರಿ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬೆಳಪು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಭಟ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
08/09/2025 01:06 pm