", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/378325-1757321806-1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Purashottama Surapur" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಾದಗಿರಿ: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕಾದರೆ ಅಕ್ಕಿ ಬದಲು ದುಡ್ಡು ಕೊಟ್ಟರೆ. ಅಕ್ರಮಕ್ಕೆ ಕಡಿವಾಣ ಹಾಕಬಹುದ...Read more" } ", "keywords": "Karnataka government scheme, rice distribution controversy, cash payment solution, Minister Sharanabasappa statement, Annabhagya scheme updates, ration system reforms, rice scam prevention, Karnataka news. ", "url": "https://dashboard.publicnext.com/node" }
ಯಾದಗಿರಿ: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕಾದರೆ ಅಕ್ಕಿ ಬದಲು ದುಡ್ಡು ಕೊಟ್ಟರೆ. ಅಕ್ರಮಕ್ಕೆ ಕಡಿವಾಣ ಹಾಕಬಹುದು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ್ ಹೇಳಿದರು.
ಯಾದಗಿರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯ ಶಹಾಪುರ, ಸುರಪುರ ಗುರುಮಠಕಲ್ ನಗರಗಳಲ್ಲಿ ಅಕ್ರಮ ಅಕ್ಕಿ ದಂಧೆ ನಡೆಯುತ್ತಿರುವ ಕುರಿತು ನನ್ನ ಗಮನಕ್ಕೆ ಬಂದಿತ್ತು, ನಾನು ಅಂದೇ ಅಧಿಕಾರಿಗಳಿಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದೆ.
ಗುರುಮಠಕಲ್ ಪಟ್ಟಣದಲ್ಲಿ ಅಕ್ಕಿ ದಾಸ್ತಾನು ಮಾಡಿ ಅಕ್ರಮ ನಡೆಸುತ್ತಿರುವ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿ ಮೂಟೆ ಜಪ್ತಿ ಮಾಡಿ ತನಿಖೆ ನಡೆಸುತ್ತಿದ್ದಾರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಇನ್ನೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಕ್ಕಿ ಬದಲಿಗೆ ದುಡ್ಡು ಹಾಕಿದ್ರೆ ಒಳ್ಳೆಯದು. ಈ ರೀತಿ ಮಾಡುವುದರಿಂದ ಅಕ್ರಮ ತಡೆಯಬಹುದು ಎಂದರು.
ಅರ್ಹರಲ್ಲದವರ ಬಿಪಿಎಲ್ ಕಾರ್ಡ್ ರದ್ದು ಮಾಡಿ, ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
PublicNext
08/09/2025 02:26 pm