ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರ : ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಭರ್ಜರಿ ಚಾಲನೆ

ಸಿದ್ದಾಪುರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 14 ರಿಂದ 17 ವರ್ಷದ ಒಳಗಿನ ವಿದ್ಯಾರ್ಥಿಗಳ 2025-26 ನೇ ಸಾಲಿನ ತಾಲೂಕ ಮಟ್ಟದ ಕ್ರೀಡಾಕೂಟವನ್ನು ತಾಲೂಕ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಯಿತು.

ಕೋಲ್ ಸಿರ್ಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮನಾ ನಾಯ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಲ್ ಸಿರ್ಸಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮಮತಾ ಮಡಿವಾಳ ವಹಿಸಿದ್ದರು.

ತಾಲೂಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ ಅವರು ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಚಕ್ರ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ರಾಜ್ಯವನ್ನು ಪ್ರತಿನಿಧಿಸಿದ ರಮಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಹೃತೀಶ ಎಂ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.

ದೈಹಿಕ ಶಿಕ್ಷಕ ಟಿ.ಬಿ. ಗೌಡ ಅವರು ಕ್ರೀಡಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಬಿಇಓ ಎಂ.ಎಚ್. ನಾಯ್ಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಹೆಗಡೆ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ನಾಯ್ಕ್, ಪ್ರೌಢ ಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ ಭಾಗವತ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ ಕುರುಬರ, ಶಿಕ್ಷಕ ಎಂ.ಎಸ್. ಹೆಗಡೆ, ಬಿ.ಆರ್.ಸಿ. ಚೈತನ್ಯಕುಮಾರ, ದೈಹಿಕ ಪರಿವೀಕ್ಷಕ ಎಂ.ವಿ. ನಾಯ್ಕ್ ಹಾಗೂ ಹಲವರು ಭಾಗವಹಿಸಿದ್ದರು.

Edited By : PublicNext Desk
PublicNext

PublicNext

08/09/2025 02:39 pm

Cinque Terre

4.96 K

Cinque Terre

0