", "articleSection": "Health & Fitness", "image": { "@type": "ImageObject", "url": "https://prod.cdn.publicnext.com/s3fs-public/38633520250908030012filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ದಿನನಿತ್ಯವೂ ನಾವು ಸೇವಿಸುವ ಆಹಾರ ಪದ್ದತಿಯಲ್ಲಿ ಉತ್ತಮ ಗುಣಮಟ್ಟದ ಪದ್ಧತಿ ಅಳವಡಿಸಿಕೊಳ್ಳುವುದರ ಜೊತೆಗೆ ದಿನನಿತ್ಯವು ಚಟುವಟಿಕೆಯಲ್ಲಿ ತ...Read more" } ", "keywords": ""Dr. Shrikant Katewale's advice on healthy eating habits"", "url": "https://dashboard.publicnext.com/node" }
ಗದಗ : ದಿನನಿತ್ಯವೂ ನಾವು ಸೇವಿಸುವ ಆಹಾರ ಪದ್ದತಿಯಲ್ಲಿ ಉತ್ತಮ ಗುಣಮಟ್ಟದ ಪದ್ಧತಿ ಅಳವಡಿಸಿಕೊಳ್ಳುವುದರ ಜೊತೆಗೆ ದಿನನಿತ್ಯವು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಹಾಗೂ ಅಡರಕಟ್ಟಿ ಗ್ರಾಮದಲ್ಲಿ ಉಚಿರ ತಪಾಸಣೆ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಸಮುದಾಯ ಕೇಂದ್ರದ ವೈದ್ಯ ಶ್ರೀಕಾಂತ್ ಕಾಟೇವಾಲೆ ಹೇಳಿದರು.
ಅವರು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಮ್ಮಿಕೊಂಡ ಜಯಪ್ರೀಯ ಕಣ್ಣಿನ ಆಸ್ಪತ್ರೆ ಹಾಗೂ ವಿವೇಕಾನಂದ ಆಸ್ಪತ್ರೆ ಹುಬ್ಬಳ್ಳಿ ಉಚಿತ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಾಂತೇಶ ಹವಳದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ. ಇಂತಹ ಆರೋಗ್ಯ ಶಿಬಿರಗಳನ್ನು ಹಳ್ಳಿಗಳಲ್ಲಿ ಹೆಚ್ಚು ನಡೆಯಬೇಕು ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುತ್ತದೆ ಹಾಗೂ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದರು.
ಜೆಸಿಐ ಅಧ್ಯಕ್ಷೆ ಲಕ್ಷ್ಮೀ ಹಂಗನಕಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ತಮ್ಮ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಿ ಎಂದರು.
PublicNext
08/09/2025 03:00 pm