", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/43595620250908032250filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ: ಕೆಎಸ್ ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ...Read more" } ", "keywords": "Narayana Guru's teachings on social equality Celebrating Narayana Guru's 171st birth anniversary", "url": "https://dashboard.publicnext.com/node" }
ಮುಲ್ಕಿ: ಕೆಎಸ್ ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ಅರ್ಚಕ ಮಹೇಶ್ ಶಾಂತಿ ಹೆಜಮಾಡಿಯವರ ಪೌರೋಹಿತ್ಯದಲ್ಲಿ ಹಾಗೂ ಮಿಥುನ್ ಶಾಂತಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕುಳಾಯಿ ಹೇಮಲತಾ ಅಶೋಕ್ ಸುವರ್ಣ ದೀಪ ಬೆಳಗಿಸಿ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಕಲಶಾಭಿಷೇಕ, ಗುರುಪೂಜೆ, ಮಹಾ ಮಂಗಳಾರತಿ ನೆರವೇರಿತು. ಕಾರ್ಯಕ್ರಮದ ಅಂತ್ಯದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಸೇರಿದಂತೆ ಹಲವು ಗಣ್ಯರು ಪ್ರಸಾದವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಏನ್ ಸನಿಲ್, ಉಪಾಧ್ಯಕ್ಷ ಟಿ. ಲೋಕೇಶ್, ಹರಿಶ್ಚಂದ್ರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಕಾರ್ಯದರ್ಶಿ ಚಂದ್ರಿಕಾ ಅಂಚನ್, ಗಣೇಶ್, ಕೋಶಾಧಿಕಾರಿ ಭಾಸ್ಕರ್ ಕೆ. ಸಾಲ್ಯಾನ್, ಗೌರವ ಸಲಹೆಗಾರ ಜನಾರ್ದನ ಬಂಗೇರ, ಗುರಿಕಾರ ಉಮೇಶ್ ಬಂಗೇರ, ಮಹಿಳಾ ಮಂಡಲದ ಅಧ್ಯಕ್ಷೆ ಉಷಾ ಹರೀಶ್, ಕಾರ್ಯದರ್ಶಿ ಅಮೃತಾ ಪ್ರಶಾಂತ್, ಕೋಶಾಧಿಕಾರಿ ಪ್ರಮೀಳಾ ನಿರಂಜನ್ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.
Kshetra Samachara
08/09/2025 03:23 pm