", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1757325534_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಪಡಿತರ ಅನ್ನ ಭಾಗ್ಯ ಯೋಜನೆ ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ಕೂಲಿ ಹೆಚ್ಚಳ, ಇಎಸ್ಐ, ಪಿಎಫ್ ಹಾಗೂ ಕಾರ್ಮಿಕ ಕಾನೂನುಗಳನ್ನು ಸಮರ್...Read more" } ", "keywords": " Chamarajanagar labour union demands and protest Labour rights issues in Chamarajanagar", "url": "https://dashboard.publicnext.com/node" } ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಒಕ್ಕೂಟದಿಂದ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ : ಪಡಿತರ ಅನ್ನ ಭಾಗ್ಯ ಯೋಜನೆ ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ಕೂಲಿ ಹೆಚ್ಚಳ, ಇಎಸ್ಐ, ಪಿಎಫ್ ಹಾಗೂ ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್ಲೋಡಿಂಗ್ ಕಾರ್ಮಿಕರ ಒಕ್ಕೂಟ ಒಕ್ಕೂಟದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟು, ರಾಷ್ಟ್ರೀಯ ಹೆದ್ದಾರಿ ಹಾದುಹೋಗಿರುವ ಶ್ರೀ ಭುವನೇಶ್ವರಿ ವೃತ್ತದ ತಲುಪಿದರು. ಬಳಿಕ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿ, ಅಲ್ಲಿಯೂ ಕೆಲಕಾಲ ಪ್ರತಿಭಟನೆ ನಡೆಸಿದರು.

ಆಹಾರ ನಿಗಮದ ಕೆಎಫ್ ಸಿಎಸ್ ಸಿ ಹಾಗೂ ಟಿಎಪಿಸಿಎಂಎಸ್ ಗೋಧಾಮು ಗಳಲ್ಲಿ ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-26ರ ಟೆಂಡರ್ ನಿಯಮ ನಿಯಮಾವಳಿಗಳಲ್ಲಿ ಇಎಸ್ಐ ಮತ್ತು ಪಿಎಫ್ ಪಾವತಿಸುವುದನ್ನು ಕಡ್ಡಾಯ ಮಾಡಿದೆ. ಸರ್ಕಾರ ಈ ಸಂಬಂಧ ಪ್ರಸ್ತುತ ವರ್ಷದ ಏಪ್ರಿಲ್ ತಿಂಗಳ 8 ರಂದು ಆದೇಶ ಮಾಡಿದೆ. ಆದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಇಎಸ್ಐ ಮತ್ತು ಪಿಎಫ್ ನೀಡುವುದು ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದಾಗಿ ಅನಾರೋಗ್ಯಕ್ಕೆ ಕೀಡಾದ ಕಾರ್ಮಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಅನುಕೂಲ ಇದ್ದರೂ ಸಹ ಅದು ಈಗ ಉಪಯೋಗಕ್ಕೆ ಬಾರದಂತಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ‌ ಹೊರ ಹಾಕಿದರು.

ಚಿಲ್ಲರೆ ಸಾಗಾಣಿಕೆ ಸಂಬಂಧ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ಯಾವುದೇ ನಿಯಮಾವಳಿಗಳನ್ನು ಪಾಲಿಸ ಪಾಲಿಸುತ್ತಿಲ್ಲ. ಸರಿಯಾದ ಸಮಯಕ್ಕೆ ಸಂಬಳ ಪಾವತಿ ಮಾಡುತ್ತಿಲ್ಲ. ಸಂಬಳ ಚೀಟಿ ನೀಡುತ್ತಿಲ್ಲ. ಹಾಗಾಗಿ ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆಯನ್ನು ಪಾವತಿಸಿ, ರಸೀದಿ ನೀಡಲು ಕ್ರಮವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

Edited By : PublicNext Desk
PublicNext

PublicNext

08/09/2025 03:28 pm

Cinque Terre

9 K

Cinque Terre

0

ಸಂಬಂಧಿತ ಸುದ್ದಿ