", "articleSection": "Government,Agriculture", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/88689_1757326290_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "7892371901" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ : ಮುಂಗಾರು ಹಂಗಾಮಿನ ಸಂದರ್ಭದಲ್ಲಿ ವಿಪರೀತ ಮಳೆಯಾಗಿ ರೈತರು ಬೆಳೆದ ಹೆಸರು, ಉದ್ದಿನ ಬೆಳೆ ಸಂಪೂರ್ಣ ನಾಶವಾಗಿದ್ದು, ರೈತರಿಗೆ ಕೂಡಲೇ ಬೆ...Read more" } ", "keywords": "Dharwad bike rally demands crop insurance for farmers Crop insurance benefits for farmers in Dharwad", "url": "https://dashboard.publicnext.com/node" }
ಧಾರವಾಡ : ಮುಂಗಾರು ಹಂಗಾಮಿನ ಸಂದರ್ಭದಲ್ಲಿ ವಿಪರೀತ ಮಳೆಯಾಗಿ ರೈತರು ಬೆಳೆದ ಹೆಸರು, ಉದ್ದಿನ ಬೆಳೆ ಸಂಪೂರ್ಣ ನಾಶವಾಗಿದ್ದು, ರೈತರಿಗೆ ಕೂಡಲೇ ಬೆಳೆವಿಮೆ, ಬೆಳೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ನೂರಾರು ಜನ ರೈತರು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ್‍ಯಾಲಿ ನಡೆಸಿದರು.
ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ರೈತರು, ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯಿಂದ ಹಾಳಾದ ಹೆಸರು ಹಾಗೂ ಉದ್ದಿನ ಕಾಳುಗಳನ್ನು ತಂದಿಟ್ಟು ಪ್ರತಿಭಟನೆ ನಡೆಸಿದರು.
ಶಾಸಕರು ಹಾಗೂ ಸಚಿವರು ಬೆಳೆ ಸಮೀಕ್ಷೆ ಮಾಡಿದ್ದಾರೆ. ಬೆಳೆ ಸಮೀಕ್ಷೆ ಮಾಡಿ ಹೋಗಿ ಒಂದು ತಿಂಗಳಾಗುತ್ತ ಬಂದರೂ ರೈತರಿಗೆ ಮಾತ್ರ ಇದುವರೆಗೂ ಪರಿಹಾರ ಸಿಕ್ಕಿಲ್ಲ. ನವಲಗುಂದ ಹಾಗೂ ಹುಬ್ಬಳ್ಳಿ ತಾಲೂಕಿನಾದ್ಯಂತ ಅತೀ ಹೆಚ್ಚು ಬೆಳೆ ನಾಶವಾಗಿದ್ದು, ಸರ್ಕಾರ ಮಾತ್ರ ರೈತರ ನೆರವಿಗೆ ಬರದೇ ಕಾಲಹರಣ ಮಾಡುತ್ತಿದೆ ಎಂದು ರೈತರು ಆರೋಪಿಸಿದರು.
ರಾಜ್ಯ ಸರ್ಕಾರ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಬರುವುದನ್ನು ಬಿಟ್ಟು ತನ್ನ ಗ್ಯಾರಂಟಿ ಯೋಜನೆಗಳಿಗೆ ಜೋತು ಬಿದ್ದಿದೆ. ರೈತರ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ನೀಡದೇ ಇದ್ದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ರೈತರು ಎಚ್ಚರಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/09/2025 03:41 pm