", "articleSection": "Law and Order", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1757329188_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಜಿಲ್ಲೆಯಲ್ಲಿ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ...Read more" } ", "keywords": " National Lok Adalat: Scheduled on September 13 in Chamarajanagar", "url": "https://dashboard.publicnext.com/node" } ಚಾಮರಾಜನಗರ : ಸೆಪ್ಟೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಸೆಪ್ಟೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್

ಚಾಮರಾಜನಗರ : ಜಿಲ್ಲೆಯಲ್ಲಿ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಭಾಗವಹಿಸಿ ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ. ಪ್ರಭಾವತಿ ತಿಳಿಸಿದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ಅಂದು ಬೆಳಗ್ಗೆ ರಿಂದ ಸಂಜೆವರೆಗೆ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯಲಿದೆ. ಈ ಅದಾಲತ್‌ನಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲು ಗುರಿ ಹೊಂದಲಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು

Edited By : PublicNext Desk
PublicNext

PublicNext

08/09/2025 04:24 pm

Cinque Terre

10.56 K

Cinque Terre

0