ಚಿತ್ರದುರ್ಗ : ನಗರದಲ್ಲಿ ಗಣೇಶ ಶೋಭಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಅವರಿಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಆದೇಶ ಸೋಮವಾರ ಬೆಳಿಗ್ಗೆ 10 ಗಂಟೆ ವೇಳೆ ಸಾರ್ವಜನಿಕರಿಗೆ ತಿಳಿಯಿತು.
ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾಗಿರುವ ಶರಣ್ ಪಂಪ್ ವೆಲ್ ಅವರಿಗೆ ಈ ನಿರ್ಬಂಧವನ್ನು ವಿಧಿಸಲಾಗಿದೆ. ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಲಾಗಿದೆ.
ಸೆಪ್ಟೆಂಬರ್ 9 ರಿಂದ ಸೆಪ್ಟೆಂಬರ್ 15ರವರೆಗೆ ನಿರ್ಬಂಧವನ್ನು ಜಾರಿಗೊಳಿಸಲಾಗಿದ್ದು, ಸೆಪ್ಟೆಂಬರ್ 11ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೈಕ್ ರ್ಯಾಲಿಯಲ್ಲಿ ಅವರು ಭಾಗವಹಿಸದಂತೆ ಸೂಚಿಸಲಾಗಿದೆ.
ಚಿತ್ರದುರ್ಗ ನಗರದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಈ ಆದೇಶವನ್ನು ಹೊರಡಿಸಿದ್ದಾರೆ.
PublicNext
08/09/2025 04:58 pm