", "articleSection": "News,Religion", "image": { "@type": "ImageObject", "url": "https://prod.cdn.publicnext.com/s3fs-public/421698-1757332720-012~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ : ಮಾತೆ ಮೇರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ನ್ನು ಉಡುಪಿ ಧರ್ಮಪ್ರಾಂತ್ಯದ ವಿವಿಧ ಚರ್ಚ್ ಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಪ...Read more" } ", "keywords": "Udupi,Monti Fest,Christians,Udupi district,nature worship,Nativity of Mary,Harvest festival,local news,Karnataka,Christian festival", "url": "https://dashboard.publicnext.com/node" }
ಉಡುಪಿ : ಮಾತೆ ಮೇರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ನ್ನು ಉಡುಪಿ ಧರ್ಮಪ್ರಾಂತ್ಯದ ವಿವಿಧ ಚರ್ಚ್ ಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಪ್ರಯುಕ್ತ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋ ಉಡುಪಿ ಶೋಕ ಮಾತ ಇಗರ್ಜಿಯಲ್ಲಿ ಪವಿತ್ರ ಬಲಿಪೂಜೆಯನ್ನು ಸರ್ಮಪಿಸಿದರು.
ಕರಾವಳಿ ಕ್ರೈಸ್ತರು ಮಾತೆ ಮೇರಿಯಮ್ಮನವರ ಜನ್ಮ ದಿನವನ್ನು ಮೊಂತಿ ಹಬ್ಬವಾಗಿ, ಹೊಸ ತೆನೆಯ ಹಬ್ಬವನ್ನಾಗಿ ಆಚರಿಸುತ್ತಾರೆ. ಚರ್ಚ್ ಗಳಲ್ಲಿ ಪುಟ್ಟ ಮಕ್ಕಳು ಮಾತೆ ಮೇರಿಯಮ್ಮನವರಿಗೆ ಹೂಗಳನ್ನು ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಹೊಸ ತೆನೆಯನ್ನು ಆಶೀರ್ವದಿಸಿ ಭಕ್ತರಿಗೆ ಹಂಚಲಾಯಿತು.
ಮೊಂತಿ ಹಬ್ಬದ ಸಲುವಾಗಿ ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆಗಳು ಜರುಗಿದವು. ಹೊಸ ತೆನೆಯನ್ನು ಮಿಶ್ರಣ ಮಾಡಿದ ಪಾಯಸವನ್ಬು ಕೂಡಾ ಜನರಿಗೆ ಚರ್ಚ್ ವತಿಯಿಂದ ಇದೇ ಸಂದರ್ಭದಲ್ಲಿ ನೀಡಲಾಯಿತು. ಸಾವಿರಾರು ಮಂದಿ ಭಕ್ತಾದಿಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.
Kshetra Samachara
08/09/2025 05:28 pm