", "articleSection": "Politics,Cultural Activity", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/400836_1757333206_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಶ್ರೀ ಭಗವದ್ಗೀತಾ ಅಭಿಯಾನ 2025 ಕರ್ನಾಟಕ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಸ್ವರ್ಣರಶ್ಮೀ ಟ್ರಸ್ಟ್ ಶಿವಮೊಗ್ಗದ ಇವುಗಳ ಸ...Read more" } ", "keywords": " KS Eshwarappa's Call: KS Eshwarappa's appeal to make Bhagavad Gita campaign successful", "url": "https://dashboard.publicnext.com/node" }
ಶಿವಮೊಗ್ಗ : ಶ್ರೀ ಭಗವದ್ಗೀತಾ ಅಭಿಯಾನ 2025 ಕರ್ನಾಟಕ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಸ್ವರ್ಣರಶ್ಮೀ ಟ್ರಸ್ಟ್ ಶಿವಮೊಗ್ಗದ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ-2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸಮಿತಿಯ ಗೌರವ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಶ್ರೀಗಳಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳ ಸಂಕಲ್ಪದಂತೆ ಇಡೀ ರಾಜ್ಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ನಡೆಯುತ್ತಿದೆ. ಶಿವಮೊಗ್ಗದಲ್ಲಿಯೂ ಕೂಡ ಅಭಿಯಾನದ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಶ್ರೀ ಭಗವದ್ಗೀತೆ 11ನೇ ಅಧ್ಯಾಯದ ಪಠಣ ಆರಂಭವಾಗಿದೆ ಎಂದರು.
5ನೇ ತರಗತಿಯಿಂದ ಪದವಿಪೂರ್ವ ತರಗತಿಗಳವರೆಗೆ ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. ಈಗಾಗಲೇ ಶಿವಮೊಗ್ಗ ತಾಲ್ಲೂಕಿನಲ್ಲಿ 135 ಶಿಕ್ಷಣ ಸಂಸ್ಥೆಗಳಲ್ಲಿ ಅಭಿಯಾನ ಆರಂಭವಾಗಿದೆ. ಪಠಣ ಹೇಳಿಕೊಡಲು 50 ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ. ಇನ್ನೂ 50 ಪ್ರಶಿಕ್ಷಕರು ಸಜ್ಜುಗೊಳ್ಳುತ್ತಿದ್ದಾರೆ ಎಂದರು.
PublicNext
08/09/2025 05:36 pm