", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/40083620250908055246filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ 2025-26ನೇ ಸಾಲಿನ ಬಿಕ್ಕಟ್ಟನ್ನು ಶಾಸನಬದ್ಧ ಸರ್ಕ...Read more" } ", "keywords": "Guest lecturers' protest for seniority and benefits Demands for consideration based on service seniority in education sector", "url": "https://dashboard.publicnext.com/node" }
ಶಿವಮೊಗ್ಗ : ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ 2025-26ನೇ ಸಾಲಿನ ಬಿಕ್ಕಟ್ಟನ್ನು ಶಾಸನಬದ್ಧ ಸರ್ಕಾರದ ಹಂತದಲ್ಲೇ ಯುಜಿಸಿ-ನಾನ್ ಯುಜಿಸಿ ಎಂಬ ತಾರತಮ್ಯ ಮಾಡದೆ, ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ, ಬೆಂಗಳೂರು, ಶಿವಮೊಗ್ಗ ಘಟಕದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಹತ್ತಾರು ವರ್ಷಗಳಿಂದ ನಿರಂತರವಾಗಿ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾ ಬಂದ ಅತಿಥಿ ಉಪನ್ಯಾಸಕರನ್ನು ಸೇವಾ ಹಿರಿತನ ಆಧಾರದಲ್ಲಿ ಪರಿಗಣಿಸಬೇಕು. ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ-ನಾನ್ ಯುಜಿಸಿ ಎಂಬ ತಾರತಮ್ಯ ಮಾಡದೆ ಶಾಸನಬದ್ಧ ಸರ್ಕಾರದ ಹಂತದಲ್ಲೇ ಮಾನವೀಯ ದೃಷ್ಠಿಯಿಂದ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅತಿಥಿ ಉಪನ್ಯಾಸಕರು ಸೇವೆಯಿಂದ ತೆರವು ಮಾಡದಂತೆ ತಡೆಯಾಜ್ಞೆಯನ್ನೂ ತಂದಿದ್ದಾರೆ. ರಾಜ್ಯದ ಶೇ.70ರಷ್ಟು ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಸೇವೆಯನ್ನು ಅವಲಂಭಿಸಿದೆ. ಆದರೂ ಅವರ ಸ್ಥಾನಗಳನ್ನು ಭರ್ತಿಮಾಡದೆ ವಿದ್ಯಾರ್ಥಿಗಳು ಪಾಠ-ಪ್ರವಚನದಿಂದ ವಂಚಿತರಾಗಿದ್ದಾರೆ. ದಶಕಗಳಿಂದ ಇದೇ ವೃತ್ತಿಯನ್ನು ನಂಬಿಬಂದ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದ್ದು, ಕಳೆದ ಒಂದೂವರೆ ತಿಂಗಳಿನಿಂದ ಗೌರವಧನವೂ ಇಲ್ಲದೆ ಕುಟುಂಬಗಳ ಸ್ಥಿತಿ ಚಿಂತಾಜನಕವಾಗಿದ್ದು, ಕೂಡಲೇ 2025-26ನೇ ಸಾಲಿನ ನೇಮಕಾತಿಯ ಬಿಕ್ಕಟ್ಟನ್ನು ಯಾವುದೇ ತಾರತಮ್ಯ ಮಾಡದೆ ನಿರ್ಣಯ ಕೈಗೊಳ್ಳಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.
PublicNext
08/09/2025 05:52 pm