", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/11357220250908060530filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನ ಸೆ.17ರಿಂದ ಅ.2ರ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನದವರೆ...Read more" } ", "keywords": "Udupi BJP's Seva Pakshik Abhiyan on Narendra Modi's birthday"", "url": "https://dashboard.publicnext.com/node" }
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನ ಸೆ.17ರಿಂದ ಅ.2ರ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನದವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 'ಸೇವಾ ಪಾಕ್ಷಿಕ ಅಭಿಯಾನ'ದ ಜಿಲ್ಲಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕೀ ಬಾತ್' ವೀಕ್ಷಣೆ ಮತ್ತು ಮಂಡಲವಾರು ಸಂಘಟನಾತ್ಮಕ ಕೆಲಸ ಕಾರ್ಯಗಳ ಪ್ರಗತಿ ಅಭಿನಂದನೀಯ. ಜಿಎಸ್ಟಿ ಸುಧಾರಣೆಯಿಂದ ದೇಶವಾಸಿಗಳಿಗೆ ಲಭಿಸುವ ಪ್ರಯೋಜನದ ಕುರಿತು ಪಕ್ಷದ ಕಾರ್ಯಕರ್ತರು ಜನಮಾನಸದಲ್ಲಿ ಅರಿವು ಮೂಡಿಸಬೇಕು. ಅ.2ರಂದು ಸೇವಾ ಪಾಕ್ಷಿಕ ಚಟುವಟಿಕೆಗಳ ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತ ಸಂಭ್ರಮ ವರ್ಷದ ವಿಜಯ ದಶಮಿಯ ಪೂರ್ಣ ಗಣವೇಶದ ಪಥ ಸಂಚಲನದಲ್ಲಿ ಪಕ್ಷದ ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಮಂಡಲ ಮಟ್ಟದ ಕಾರ್ಯಾಗಾರಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನದ ಎಲ್ಲಾ ಸೇವಾ ಕಾರ್ಯಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲರೂ ಬದ್ಧತೆಯಿಂದ ಕೈಜೋಡಿಸಬೇಕು ಎಂದರು.
ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಶ್ರೀಕಾಂತ್ ನಾಯಕ್ ಸೇವಾ ಪಾಕ್ಷಿಕ ಅಭಿಯಾನದಲ್ಲಿ ಜಿಲ್ಲೆ, ಮಂಡಲ ಮತ್ತು ಬೂತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಸೇವಾ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
PublicNext
08/09/2025 06:05 pm