", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/400836_1757335842_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಹಿಂದಿನ ನಿರ್ಧಾರಗಳೇ ಕಾರಣ ಎಂದು ಬಿಜೆಪಿ ಎಂಎಲ್‌ಸಿ ಡಿ.ಎಸ್.ಅರುಣ್ ಆರೋಪಿಸ...Read more" } ", "keywords": "Maddur riots caused by government's appeasement policy DS Arun's criticism of government's role in Maddur violence", "url": "https://dashboard.publicnext.com/node" }
ಶಿವಮೊಗ್ಗ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಹಿಂದಿನ ನಿರ್ಧಾರಗಳೇ ಕಾರಣ ಎಂದು ಬಿಜೆಪಿ ಎಂಎಲ್‌ಸಿ ಡಿ.ಎಸ್.ಅರುಣ್ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಹುಸಂಖ್ಯಾತ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಮತ್ತು ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ ಎಂದು ಆರೋಪಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಡಿ.ಜೆ.ಹಳ್ಳಿ ಮತ್ತು ಕೆ.ಜೆ. ಹಳ್ಳಿ ಗಲಭೆ ಹಾಗೂ ವಿಧಾನಸೌಧದೊಳಗೆ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಹುಬ್ಬಳ್ಳಿಯ ಗಲಭೆಯಲ್ಲೂ ಪೊಲೀಸ್ ಠಾಣೆಗೆ ನುಗ್ಗಿ ಹಲ್ಲೆ ನಡೆಸಿದವರ ಪ್ರಕರಣಗಳನ್ನು ಖುಲಾಸೆ ಮಾಡಲಾಗಿದೆ. ಇಂತಹ ಪ್ರಕರಣಗಳನ್ನು ವಾಪಸ್ ಪಡೆದಿರುವುದು ಮುಸ್ಲಿಮರಲ್ಲಿ 'ನಮಗೆ ಸರ್ಕಾರದ ಅಭಯ ಹಸ್ತ ಇದೆ' ಎಂಬ ಭಾವನೆಯನ್ನು ಮೂಡಿಸಿದೆ. ಸರ್ಕಾರವೇ ಈ ರೀತಿ ಧೈರ್ಯ ಕೊಟ್ಟ ಮೇಲೆ ಇಂತಹ ಅನಾಹುತಗಳು ಸಂಭವಿಸುವುದು ಸಹಜ ಎಂದು ಅರುಣ್ ಹೇಳಿದರು.
ಇಂದು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ಹೊಡೆಯುತ್ತಾರೆ. ನಾಳೆ ಜನರ ಮೇಲೆ ಕಲ್ಲು ಹೊಡೆಯುತ್ತಾರೆ. ಯಾರನ್ನಾದರೂ ಕೊಲೆ ಮಾಡಿದರೂ ಅವರಿಗೆ ಭಯವಿಲ್ಲದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
PublicNext
08/09/2025 06:20 pm