", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1757336875-g.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಯಂತ್ರಗಳನ್ನು ಬಳಕೆ ಮಾಡದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಐಸಿಸಿ ಅಧ್...Read more" } ", "keywords": "Shivamogga election news, K S Eswarappa, father-son election win, voting machine controversy, election commission response, Karnataka assembly elections, Shivamogga constituency news, EVM debate.", "url": "https://dashboard.publicnext.com/node" }
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಯಂತ್ರಗಳನ್ನು ಬಳಕೆ ಮಾಡದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪ್ಪ, ಮಕ್ಕಳು ಗೆದ್ದಾಗ ಮತಯಂತ್ರ ಸರಿ ಇರುತ್ತದೆ. ಸೋತಾಗ ಮತಯಂತ್ರ ಸರಿ ಇರುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಯವರು ಬ್ಯಾಲೇಟ್ ಪೇಪರ್ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರು ಕಳೆದ ಚುನಾವಣೆಯಲ್ಲಿ ಸೋತ ಕಾರಣ ಇವಿಎಂನಲ್ಲಿ ದೋಷವಿದೆ ಎಂದು ಹೇಳುತ್ತಿದ್ದಾರೆ. ಆದರೆ, ಅದಕ್ಕಿಂತ ಹಿಂದಿನ ಚುನಾವಣೆಯಲ್ಲಿ ಅವರು ಗೆದ್ದಿದ್ದರು. ಅದರ ಬಗ್ಗೆ ಏನು ಹೇಳುತ್ತಾರೆ ಎಂದು ಈಶ್ವರಪ್ಪ ಪ್ರಶ್ನಿಸಿದರು. ಅಲ್ಲದೆ, ಖರ್ಗೆಯವರ ಮಗ ಸಹ ಇವಿಎಂ ಯಂತ್ರದಿಂದಲೇ ಗೆದ್ದಿರುವುದನ್ನು ಅವರು ತಿಳಿದುಕೊಳ್ಳಬೇಕು ಎಂದರು.
ಹಾಗೆಯೇ, ಇದು ಕಾಂಗ್ರೆಸ್‌ನವರ ಕುತಂತ್ರ ರಾಜಕಾರಣ ಎಂದು ಆರೋಪಿಸಿದ ಅವರು, ರಾಜ್ಯದ ಜನರು ಈಗ ಜಾಗೃತರಾಗಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಇದನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಈ ಇವಿಎಂ ಪ್ರಕರಣವನ್ನು ತಂದಿದೆ ಎಂದರು. ಮಂಡ್ಯದ ಮದ್ದೂರಿನಲ್ಲಿ ನಡೆದ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಗಲಾಟೆ ಕುರಿತು ಮಾತನಾಡಿದ ಅವರು,ಈ ಘಟನೆಯ ನಂತರ ಸರ್ಕಾರವು ಹಿಂದೂಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಮತ್ತು ಮುಸಲ್ಮಾನರಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.
PublicNext
08/09/2025 06:38 pm