", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1757336977-KOMU.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಡ್ಯ : ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ ಅವರು, ಘಟ...Read more" } ", "keywords": "Maddur riots, Bengaluru news, BJP-JDS politics, stone pelting incident, Ganesh Visarjan violence, police action, 21 arrests, Muslim arrests, communal violence, Karnataka politics, Chaluvarayaswamy statement, opposition party politics, law and order situation, communal harmony", "url": "https://dashboard.publicnext.com/node" } ಬೆಂಗಳೂರು : ಮದ್ದೂರು ಗಲಭೆ - 21 ಜನರ ಬಂಧನ, ಬಿಜೆಪಿ-ಜೆಡಿಎಸ್ ರಾಜಕೀಯ ಮಾಡ್ತಿವೆ - ಸಚಿವ ಚಲುವರಾಯಸ್ವಾಮಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಮದ್ದೂರು ಗಲಭೆ - 21 ಜನರ ಬಂಧನ, ಬಿಜೆಪಿ-ಜೆಡಿಎಸ್ ರಾಜಕೀಯ ಮಾಡ್ತಿವೆ - ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ ಅವರು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಮೆರವಣಿಗೆ ಸಾಗುತ್ತಿದ್ದಾಗ ಮಸೀದಿ ಕಡೆಯಿಂದ ಕಲ್ಲು ತೂರಾಟ ನಡೆದಿದೆ ಎಂಬ ಮಾಹಿತಿ ಇದೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

​ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ, ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಬೇರೆ ಯಾವುದೇ ಪ್ರಕರಣದಲ್ಲೂ ಇಷ್ಟು ಬೇಗ ಕ್ರಮ ಕೈಗೊಂಡ ಉದಾಹರಣೆ ಇಲ್ಲ ಎಂದು ಅವರು ತಿಳಿಸಿದರು.

​ಆದರೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಂಡು ಕೋಮು ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳುವಂತೆ ಸಲಹೆ ನೀಡುವ ಬದಲು, ಇಂತಹ ಘಟನೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದರು.

​ಮದ್ದೂರಿನಲ್ಲಿ ಹಿಂದೆ ಎಂದೂ ಇಂತಹ ಘಟನೆಗಳು ನಡೆದಿಲ್ಲ. ಹೊರಗಿನಿಂದ ಬಂದ ಯಾರೋ ಗಲಭೆ ಸೃಷ್ಟಿಸಿರಬಹುದು ಎಂದು ತನಿಖೆ ನಡೆಯುತ್ತಿದೆ. ಯಾವುದೇ ಸಮಾಜದವರಿದ್ದರೂ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ನಾವು ಯಾರ ಓಲೈಕೆಯನ್ನೂ ಮಾಡುತ್ತಿಲ್ಲ. ಹಾಗಿದ್ದರೆ 21 ಜನರನ್ನು ಯಾಕೆ ಬಂಧಿಸುತ್ತಿದ್ದೆವು ಎಂದು ಸಚಿವರು ಪ್ರಶ್ನಿಸಿದರು.

​ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಹಿಸಲು ಆಗುತ್ತಿಲ್ಲ. ಸದನದಲ್ಲಿ ನಮ್ಮನ್ನು ಎದುರಿಸಲು ಸಾಧ್ಯವಾಗದ ಕಾರಣ, ಇಂತಹ ಘಟನೆಗಳು ಆದಾಗ ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.

Edited By : Shivu K
PublicNext

PublicNext

08/09/2025 06:39 pm

Cinque Terre

17 K

Cinque Terre

3

ಸಂಬಂಧಿತ ಸುದ್ದಿ