", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/454738-1757338377-New-(1280-x-720-px)-(53).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಲ್ಲಾಪುರ : ಅಂಗನವಾಡಿ ಮುಗಿಸಿ ಮನೆಗೆ ಹೋಗುತ್ತಿದ್ದ ಗರ್ಭಿಣಿ ಹಾಗೂ ನಾಲ್ಕು ಮಕ್ಕಳ ಮೇಲೆ ಬೃಹತ್ ಮರ ಉರುಳಿ ಗರ್ಭಿಣಿ ಸಾವನ್ನಪ್ಪಿರುವ ದುರ್ಘಟನ...Read more" } ", "keywords": "Pregnant woman dies in Yellapur tree accident"", "url": "https://dashboard.publicnext.com/node" }
ಯಲ್ಲಾಪುರ : ಅಂಗನವಾಡಿ ಮುಗಿಸಿ ಮನೆಗೆ ಹೋಗುತ್ತಿದ್ದ ಗರ್ಭಿಣಿ ಹಾಗೂ ನಾಲ್ಕು ಮಕ್ಕಳ ಮೇಲೆ ಬೃಹತ್ ಮರ ಉರುಳಿ ಗರ್ಭಿಣಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಕಿರವತ್ತಿ ಬಳಿಯ ಡೊಮಗೇರಿ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅಂಗನವಾಡಿಗೆ ತೆರಳಿದ್ದ ತನ್ನ ಮಗಳನ್ನು ಕರೆದುಕೊಂಡು ಮನೆಗೆ ತೆರಳುತ್ತಿದ್ದ ಗರ್ಭಿಣಿ ಸಾವಿತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಮಕ್ಕಳನ್ನು ಸೇರಿ ಒಟ್ಟು ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಸಮಯದಲ್ಲಿ ಒಟ್ಟು ಆರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸ್ಥಳದಲ್ಲಿದ್ದು, ಉಳಿದ ಮೂವರು ಮಕ್ಕಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಠಾಣೆಯ ಸಿಪಿಐ ರಮೇಶ್ ಹರಗಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
08/09/2025 07:03 pm