", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/454738-1757338807-New-(1280-x-720-px)-(54).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಇಂದಿರಾನಗರ ...Read more" } ", "keywords": "Importance of maintaining pedestrian pathways in Bengaluru BBMP's efforts to improve public spaces in Bengaluru", "url": "https://dashboard.publicnext.com/node" } ಬೆಂಗಳೂರು : ಪಾದಚಾರಿ ಮಾರ್ಗಗಳ ನಿರ್ವಹಣೆಯ ಜವಾಬ್ದಾರಿ ವಾಣಿಜ್ಯ ಮಳಿಗೆಗಳಿಗೆ ನೀಡಲು ಕ್ರಮ - ರಾಜೇಂದ್ರ ಚೋಳನ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಪಾದಚಾರಿ ಮಾರ್ಗಗಳ ನಿರ್ವಹಣೆಯ ಜವಾಬ್ದಾರಿ ವಾಣಿಜ್ಯ ಮಳಿಗೆಗಳಿಗೆ ನೀಡಲು ಕ್ರಮ - ರಾಜೇಂದ್ರ ಚೋಳನ್

ಬೆಂಗಳೂರು : ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಇಂದಿರಾನಗರ 100 ಅಡಿ ರಸ್ತೆಯಲ್ಲಿ ವೈಟ್ ಟಾಪಿಂಗ್ ರಸ್ತೆ ಅಭಿವೃದ್ಧಿ ಪಡಿಸಿದ್ದು, ಪಾದಚಾರಿ ಮಾರ್ಗದುದ್ದಕ್ಕೂ ತೋಟಗಾರಿಕಾ ವಿಭಾಗದಿಂದ ಸಸಿಗಳನ್ನು ನಡೆಸಲಾಗಿದೆ. ಆದರೆ ಅದನ್ನು ಸರಿಯಾಗಿ ನಿರ್ವಹಣೆ ಮಾಡಿರುವುದಿಲ್ಲ. ಈ ಸಂಬಂಧ ಎಲ್ಲಾ ಕಡೆ ಒಂದೇ ಮಾದರಿಯಲ್ಲಿ ಕಾಣುವ ರೀತಿ ವಿನ್ಯಾಸ ಮಾಡಬೇಕು. ಅದಕ್ಕಾಗಿ ಸ್ಥಳೀಯ ವಾಣಿಜ್ಯ ಉದ್ದಿಮೆಗಳ ಜೊತೆ ಸಭೆ ನಡೆಸಿ ಒಡಂಬಡಿಕೆ ಮಾಡಿಕೊಂಡು ಅವರೇ ಅದನ್ನು ನಿರ್ವಹಣೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದಿರಾ ನಗರ 100 ಅಡಿ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಬೊಲಾರ್ಡ್ಸ್ ಗಳು ಹಾಳಾಗಿದ್ದು, ಅವುಗಳನ್ನು ಸರಿಪಡಿಸಬೇಕು. ರಸ್ತೆ ಬದಿ ಕಸ ಬಿಸಾಡುವ ಉದ್ದಿಮೆ/ಮಳಿಗಗಳಿಗೆ ದಂಡ ವಿಧಿಸಿ ಮತ್ತೆ ಕಸ ಬಿಸಾಡದಂತೆ ಎಚ್ಚರಿಕೆ ನೀಡುವುದರ ಜೊತೆಗೆ ಎಲ್ಲಾ ವಾಣಿಜ್ಯ ಉದ್ದಿಮೆಗಳಿಗೆ ಕಡ್ಡಾಯವಾಗಿ ತ್ಯಾಜ್ಯ ಬಿನ್ ಗಳನ್ನು ಅಳವಡಿಸಿಕೊಳ್ಳಲು ಸೂಚನೆ ನೀಡಬೇಕು.

ದೊಮ್ಮಲೂರು ಮೇಲ್ಸೇತುವೆ ಬಳಿ ಇರುವ ಟ್ರಾನ್ಸ್ ಫರ್ ಸ್ಟೇಷನ್, ಒಣ ತ್ಯಾಜ್ಯ ಸಂಗ್ರಹಣಾ ಘಟಕ ಬಳಿ ತುಂಬಾ ದುರ್ವಾಸನೆ ಬರುತ್ತಿದ್ದು, ಆ ಪ್ರದೇಶದಲ್ಲಿ ಪ್ರೆಷರ್ ಪಂಪ್ ಮೂಲಕ ಸ್ವಚ್ಛಗೊಳಿಸಿ, ವಾಸನೆ ಬರದಂತೆ ಹಾಗೂ ಸುಂದರವಾಗಿ ಕಾಣುವಂತೆ ಸಮಗ್ರ ಯೋಜನೆ ರೂಪಿಸಿ ಅಭಿವೃದ್ಧಿ ಪಡಿಸಲು ಸೂಚನೆ ನೀಡಿದರು. ಅಲ್ಲದೆ ಇದೇ ಸ್ಥಳದಲ್ಲಿ ಸ್ಕ್ರ್ಯಾಪ್ ವಾಹನಗಳಿದ್ದು, ಅವುಗಳನ್ನು ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು.

Edited By :
PublicNext

PublicNext

08/09/2025 07:12 pm

Cinque Terre

7.44 K

Cinque Terre

0

ಸಂಬಂಧಿತ ಸುದ್ದಿ