", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1757339118-Untitled-design---2025-09-08T191924.269.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಹುದ್ದೆಗೆ ಸೆ.9 ರಂದು ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಆಡಳಿತಾರೂಢ ಎನ್...Read more" } ", "keywords": "Delhi, Vice President election, tomorrow, administration, opposition parties, intense competition, political battle, voting, India, Rajya Sabha, candidate contest, political news", "url": "https://dashboard.publicnext.com/node" }
ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಹುದ್ದೆಗೆ ಸೆ.9 ರಂದು ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಆಡಳಿತಾರೂಢ ಎನ್‌ಡಿಎ ಪಕ್ಷಗಳು ಹಾಗೂ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಇದರ ಮಧ್ಯೆ ಬಿಜೆಡಿ, ಬಿಆರ್‌ಎಸ್ ಸೇರಿದಂತೆ 17 ಸಂಸದರು ತಾವು ಯಾರಿಗೆ ಮತ ಚಲಾಯಿಸುತ್ತೇವೆ ಎಂಬುದರ ಕುರಿತು ನಿರ್ಧಾರ ಪ್ರಕಟಿಸಿದೇ ಇರುವುದು ಕುತೂಹಲಕ್ಕೆ ಕಾರಣವಾಗಿದೆ.
ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ, ತಮಿಳುನಾಡು ಮೂಲದ ಸಿ.ಪಿ.ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ತೆಲಂಗಾಣ ಮೂಲದ ಬಿ.ಸುದರ್ಶನ ರೆಡ್ಡಿ ಕಣದಲ್ಲಿದ್ದಾರೆ. ಯಾರಿಗೆ ಮತ ಚಲಾಯಿಸಬೇಕು ಎಂಬುದನ್ನು ನಿರ್ಧರಿಸದ 17 ಸಂಸದರನ್ನು ಹೊರತುಪಡಿಸಿ, ಉಳಿದ ಎಲ್ಲ ಸಂಸದರು ತಮ್ಮ ಪಕ್ಷಗಳ ಆಧಾರದ ಮೇಲೆ ಮತ ಚಲಾಯಿಸಿದರೆ ರಾಧಾಕೃಷ್ಣನ್ ಅವರು ರೆಡ್ಡಿ ಅವರ ವಿರುದ್ಧ 439-324 ಮತಗಳೊಂದಿಗೆ ಮುನ್ನಡೆ ಪಡೆದುಕೊಳ್ಳಲಿದ್ದಾರೆ.
ಪ್ರಸ್ತುತ ಮತದಾರರ ಸಂಖ್ಯೆ 781 (ರಾಜ್ಯಸಭೆ, ಲೋಕಸಭೆಯ ಸದಸ್ಯರು) ಆಗಿದೆ. ಮತದಾರರ ಪಟ್ಟಿ ಸಿದ್ಧವಾದ ಬಳಿಕ ಶಿಬು ಸೊರೇನ್ ಅವರು ನಿಧನರಾದರು. ಅವರ ಸ್ಥಾನವೂ ಸೇರಿದಂತೆ ಒಟ್ಟು ಏಳು ಸ್ಥಾನಗಳು ಖಾಲಿ ಇವೆ. ಬಿಜೆಡಿ ಏಳು, ಬಿಆರ್‌ಎಸ್‌ನ ನಾಲ್ವರು, ಅಕಾಲಿದಳ, ಜಡ್‌ಪಿಎಮ್ ಮತ್ತು ವಿಒಟಿಟಿಪಿಯ ತಲಾ ಒಬ್ಬರು ಹಾಗೂ ಮೂವರು ಸ್ವತಂತ್ರ ಸದಸ್ಯರು ತಮ್ಮ ಆದ್ಯತೆ ಯಾರಿಗೆ ಎಂಬುದರ ಸ್ಪಷ್ಟ ಸೂಚನೆ ಇಲ್ಲಿಯವರೆಗೂ ನೀಡಿಲ್ಲ.
'ಯಾರಿಗೆ ಮತ ಚಲಾಯಿಸಬೇಕು ಎಂಬುದರ ಬಗ್ಗೆ ಪಕ್ಷದ ನಾಯಕತ್ವ ಸೂಕ್ತ ಸಮಯದಲ್ಲಿ ನಿರ್ಧರಿಸಲಿದೆ' ಎಂದು ಬಿಜೆಡಿಯ ಸಸ್ಮಿತ್ ಪಾತ್ರ, ಬಿಆರ್‌ಎಸ್‌ನ ಕೆ. ಸುರೇಶ್ ರೆಡ್ಡಿ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ್ದಾರೆ. ಜಡ್‌ಪಿಎಂ, ವಿಒಟಿಟಿಪಿ ಸಂಸದರು ಈ ಕುರಿತು ಪ್ರತಿಕ್ರಿಯಿಸಲಿಲ್ಲ. ಅಕಾಲಿದಳ ಮತ್ತು ಪಕ್ಷೇತರ ಸಂಸದ ಸಂಪರ್ಕ ಸಾಧ್ಯವಾಗಲಿಲ್ಲ.
'ಇಂಡಿಯಾ' ಕೂಟ ತೊರೆದಿರುವ ಎಎಪಿ ತನ್ನ 10 ಸಂಸದರ ಬೆಂಬಲವನ್ನು ರೆಡ್ಡಿ ಅವರಿಗೆ ಸೂಚಿಸಿದ್ದರೆ, ಯಾವುದೇ ಬಣದ ಜತೆ ಗುರುತಿಸಿಕೊಳ್ಳದ ವೈಎಸ್‌ಆರ್ ಕಾಂಗ್ರೆಸ್ ತನ್ನ 11 ಸದಸ್ಯರ ಬೆಂಬಲವನ್ನು ರಾಧಾಕೃಷ್ಣನ್ ಅವರಿಗೆ ನೀಡುವುದಾಗಿ ತಿಳಿಸಿದೆ.
ಗೌಪ್ಯ ಮತದಾನ ಆದ್ದರಿಂದ ಅಡ್ಡ ಮತದಾನದ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ಇದರ ನಿರೀಕ್ಷೆಯಲ್ಲಿರುವ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಯ ಮತಗಳಿಕೆಯಲ್ಲಿ ಆಗಬಹುದಾದ ಏರಿಳಿಕೆ ಕುರಿತು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಮತದಾನ ಇದೇ ಸೆ.9 ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೂ ನಡೆಯಲಿದೆ. ಅದೇ ದಿನ ಸಂಜೆ 6 ಗಂಟೆಗೆ ಮತ ಎಣಿಕೆ ನಡೆಯಲಿದ್ದು ಬಳಿಕ ಫಲಿತಾಂಶ ಪ್ರಕಟವಾಗಲಿದೆ.
ಪ್ರಾಶಸ್ತ್ಯ ಮತದಾನ ಪದ್ಧತಿಯಡಿ ನಡೆಯುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು ಈ ಹಿಂದೆ ಅಮಾನ್ಯಗೊಂಡದ್ದಿದೆ. ಹೀಗಾಗಿಯೇ ಸಂಸದರಿಗೆ ಈ ಮತದಾನ ಪದ್ಧತಿಯ ಬಗ್ಗೆ ಸೂಕ್ತ ತರಬೇತಿ ನೀಡಲು ಆಡಳಿತ ಮತ್ತು ವಿರೋಧ ಪಕ್ಷಗಳ ಮುಖಂಡರು ಕಾಳಜಿ ವಹಿಸಿದ್ದಾರೆ. ಈ ಪದ್ಧತಿಯಡಿ ಹೇಗೆ ಮತ ಚಲಾಯಿಸಬೇಕು ಎಂಬುದರ ಕುರಿತು ಬಿಜೆಪಿ ಈಗಾಗಲೇ ತನ್ನ ಸಂಸದರಿಗೆ ತರಬೇತಿ ನೀಡಲು ಆರಂಭಿಸಿದೆ. ವಿರೋಧ ಪಕ್ಷವು ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಸೋಮವಾರ ಅಣಕು ಮತದಾನ ಏರ್ಪಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನ ಅನೆಕ್ಸ್‌ನಲ್ಲಿ ರಾತ್ರಿ ಭೋಜನ ಕೂಟ ಆಯೋಜಿಸಿದ್ದಾರೆ.
PublicNext
08/09/2025 07:15 pm