", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/38633520250908074536filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಕಾನೂನು ಸಚಿವ ಎಚ್.ಕೆ. ಪಾಟೀಲ ಮೊದಲು ಕಾನೂನು ತಾವು ಪಾಲಿಸಬೇಕು ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಅಧ್ಯಕ್ಷ ರಾಜು ಖಾನಪ್ಪನವರ ಹೇಳಿದರು. ...Read more" } ", "keywords": "Supreme Court ruling should apply to all religions, says Raju Khanapannavar", "url": "https://dashboard.publicnext.com/node" }
ಗದಗ : ಕಾನೂನು ಸಚಿವ ಎಚ್.ಕೆ. ಪಾಟೀಲ ಮೊದಲು ಕಾನೂನು ತಾವು ಪಾಲಿಸಬೇಕು ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಅಧ್ಯಕ್ಷ ರಾಜು ಖಾನಪ್ಪನವರ ಹೇಳಿದರು. ಗಣೇಶ ವಿಸರ್ಜನೆ ವೇಳೆ ಪೊಲೀಸ್ ಇಲಾಖೆ ಡಿಜೆ ನಿಷೇಧದ ಆದೇಶವನ್ನು ಅನುಷ್ಠಾನಗೊಳಿಸುತ್ತಿದೆ, ಆದರೆ ನಸುಕಿನ ಜಾವ ಮಸೀದಿಯ ಮೈಕ್‌ಗಳನ್ನು ಬಂದ್ ಮಾಡುವ ಕಾರ್ಯವೂ ಆಗಬೇಕು. ಸುಪ್ರೀಂ ಕೋರ್ಟ್ ಆದೇಶವು ಕೇವಲ ಹಿಂದೂಗಳ ಧಾರ್ಮಿಕ ಹಬ್ಬಗಳಿಗೆ ಮಾತ್ರವಲ್ಲದೆ ಎಲ್ಲಾ ಧರ್ಮಗಳಿಗೆ ಸಮಾನವಾಗಿ ಅನ್ವಯಿಸಬೇಕು ಎಂದು ಅವರು ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ವಿಸರ್ಜನೆಯ ಸಮಯದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಪೊಲೀಸರಿಂದ ಹಿಂದೂ ಮುಖಂಡರಿಗೆ ಸೂಚಿಸಲಾಗುತ್ತದೆ. ಆದರೆ, ಇದೇ ನಿಯಮ ಇತರ ಧರ್ಮಗಳಿಗೆ ಅನ್ವಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಜಿಲ್ಲೆಯ ನ್ಯಾಯಾಲಯ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿಯೇ ಹೆಚ್ಚು ಶಬ್ದದ ಆಜಾನ್ ಕೇಳಿಸುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದರು.
“ಕಾನೂನು ಸಚಿವ ಎಚ್.ಕೆ. ಪಾಟೀಲ ಅವರ ಜನ್ಮದಿನದ ಸಂಭ್ರಮದ ವೇಳೆ ಹೆಚ್ಚಿನ ಶಬ್ದದ ವ್ಯವಸ್ಥೆ ಮಾಡಿ ಕಾರ್ಯಕ್ರಮ ನಡೆಸಲಾಗಿದೆ. ಅವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ?” ಎಂದು ಪ್ರಶ್ನಿಸಿದ ಅವರು, “ಈದ್ ಮಿಲಾದ್ ಸಂದರ್ಭದಲ್ಲಿ ಡಿಜೆ ಬಳಸಿದ್ದರೂ ಕ್ರಮವಾಗಿಲ್ಲ. ಮುಂದಿನ ಸೆಪ್ಟೆಂಬರ್ 19ರಂದು ನಡೆಯಲಿರುವ ಕಾರ್ಯಕ್ರಮಕ್ಕೂ ಅನುಮತಿ ನೀಡಬಾರದು. ನೀಡಿದಲ್ಲಿ ಸಮಿತಿ ತಡೆಯುತ್ತದೆ” ಎಂದು ಎಚ್ಚರಿಕೆ ನೀಡಿದರು.
Kshetra Samachara
08/09/2025 07:45 pm