", "articleSection": "Education", "image": { "@type": "ImageObject", "url": "https://prod.cdn.publicnext.com/s3fs-public/43595620250908082130filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ: ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಾಲೆ ಹಾಗೂ ಮನೆ ಎರಡೂ ಸಮಾನವಾಗಿ ಪಾತ್ರವಹಿಸಬೇಕು. ಮಕ್ಕಳಲ್ಲಿ ಅಧ್ಯಯನದ ಜೊತೆಗೆ ಶಿಸ್ತು, ನೈತಿಕ ಮೌಲ್...Read more" } ", "keywords": "Importance of holistic education in personality development Need for educational reforms to focus on student development", "url": "https://dashboard.publicnext.com/node" }
ಮುಲ್ಕಿ: ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಾಲೆ ಹಾಗೂ ಮನೆ ಎರಡೂ ಸಮಾನವಾಗಿ ಪಾತ್ರವಹಿಸಬೇಕು. ಮಕ್ಕಳಲ್ಲಿ ಅಧ್ಯಯನದ ಜೊತೆಗೆ ಶಿಸ್ತು, ನೈತಿಕ ಮೌಲ್ಯಗಳು ಹಾಗೂ ಸಮಾಜ ಸೇವೆಯ ಮನೋಭಾವ ಬೆಳೆಸುವಂತೆ ಪೋಷಕರು ಮತ್ತು ಶಿಕ್ಷಕರು ಸಹಕಾರ ನೀಡಬೇಕು ಎಂದು ಸಂಪನ್ಮೂಲ ವ್ಯಕ್ತಿ ದಾಮೋದರ್ ಶರ್ಮಾ ಹೇಳಿದರು.
ಮುಲ್ಕಿಯ ವಿಜಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಕ್ಷಕ ರಕ್ಷಕ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಪೋಷಕರು ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವ ಮೂಲಕ ಅವರ ಆಸಕ್ತಿಗಳನ್ನು ಅರಿತುಕೊಳ್ಳಬೇಕು. ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಸಬೇಕು. ಶಿಕ್ಷಣವು ಅಂಕಗಳನ್ನು ಗಳಿಸಲು ಮಾತ್ರದ ಸಾಧನವಾಗದೆ, ವ್ಯಕ್ತಿತ್ವದ ವಿಕಾಸದ ಸಾಧನವಾಗಬೇಕು ಎಂದು ಅವರು ತಿಳಿಸಿದರು.
ಸಭೆಗೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಮಚಂದ್ರ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವೆಂಕಟೇಶ್ ಭಟ್ ಮತ್ತು ಶ್ರೀ ಅರುಣ್ ಕುಮಾರ್ ಉಪಸ್ಥಿತರಿದ್ದರು.
Kshetra Samachara
08/09/2025 08:22 pm