", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/454738-1757343504-New-(1280-x-720-px)-(57).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಪಶ್ಚಿಮ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಗರೀಕರ ಆರೋಗ್ಯದ ಹಿತದೃಷ್ಟಿಯಿಂದ ನಗರ ನೈರ್ಮಲ್ಯ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ, ಸೂಕ್...Read more" } ", "keywords": "Prioritizing cleanliness and hygiene in Bengaluru, says Dr. Rajendra KV", "url": "https://dashboard.publicnext.com/node" }
ಬೆಂಗಳೂರು : ಪಶ್ಚಿಮ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಗರೀಕರ ಆರೋಗ್ಯದ ಹಿತದೃಷ್ಟಿಯಿಂದ ನಗರ ನೈರ್ಮಲ್ಯ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ, ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ.ರಾಜೇಂದ್ರ ಕೆ.ವಿ ರವರು ತಿಳಿಸಿದರು.
ಇಂದು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ, ಮಲ್ಲೇಶ್ವರಂ ನ ಐಪಿಪಿ ಸಭಾಂಗಣದಲ್ಲಿ ಕಾಮಗಾರಿ, ನಗರ ಯೋಜನೆ, ಆರೋಗ್ಯ, ತೋಟಗಾರಿಕೆ, ಪಶುಪಾಲನೆ, ಕಂದಾಯ, ಜಾಹೀರಾತು, ಕಲ್ಯಾಣ, ಮಾರುಕಟ್ಟೆ ಹಾಗೂ ಅರಣ್ಯ ಇಲಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು.
ಪಾಲಿಕೆಯ ವ್ಯಾಪ್ತಿಯಲ್ಲಿ ನಾಗರೀಕ ಸ್ನೇಹಿ, ನಾಗರೀಕರ ಸಮಸ್ಯೆಗಳಿಗೆ ತ್ವರಿತವಾಗಿ, ಸಕಾರಾತ್ಮಕವಾಗಿ ಸ್ಪಂದಿಸಿ ಪರಿಹಾರ ಒದಗಿಸುವಂತಹ ಆಡಳಿತ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.
ಪಾಲಿಕೆಯ ವ್ಯಾಪ್ತಿಯಲ್ಲಿ ಕಂದಾಯ ಸಂಗ್ರಹಕ್ಕಾಗಿ ನಿಗದಿಪಡಿಸಿರುವ ಗುರಿ ತಲುಪಲು ಹಾಗೂ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
PublicNext
08/09/2025 08:28 pm