", "articleSection": "Education,Government", "image": { "@type": "ImageObject", "url": "https://prod.cdn.publicnext.com/s3fs-public/454738-1757343964-New-(1280-x-720-px)-(59).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ...Read more" } ", "keywords": " CET Option Entry Deadline Extension: Extension of time to record CET options till September 9, 8 am", "url": "https://dashboard.publicnext.com/node" } ಬೆಂಗಳೂರು : ಸಿಇಟಿ ಆಪ್ಷನ್ ದಾಖಲಿಸಲು ಸೆ.9 ಬೆಳಗ್ಗೆ 8ರವರೆಗೆ ಸಮಯ ವಿಸ್ತರಣೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಿಇಟಿ ಆಪ್ಷನ್ ದಾಖಲಿಸಲು ಸೆ.9 ಬೆಳಗ್ಗೆ 8ರವರೆಗೆ ಸಮಯ ವಿಸ್ತರಣೆ

ಬೆಂಗಳೂರು : ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಇಚ್ಛೆ/ಆಯ್ಕೆಗಳನ್ನು ಅದಲು-ಬದಲು ಹಾಗೂ ಹೊಸದಾಗಿ ಸೇರಿಸುವುದಕ್ಕೆ ಸೆ.9ರಂದು ಬೆಳಿಗ್ಗೆ 8ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು 10 ಸಾವಿರ ರೂಪಾಯಿ ಕಾಷನ್‌ ಡೆಪಾಸಿಟ್‌ ಪಾವತಿಸುವುದಕ್ಕೂ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಸಮಯ ನೀಡಲಾಗಿದೆ.

ಅಭ್ಯರ್ಥಿಗಳ ಕೋರಿಕೆ ಮೇರೆಗೆ ಸಮಯ ವಿಸ್ತರಣೆ ಮಾಡಿದ್ದು, ಈ ಅವಧಿಯೊಳಗೆ ಅಭ್ಯರ್ಥಿಗಳು ಕಾಷನ್ ಡೆಪಾಸಿಟ್ ಕಟ್ಟಿ, ಇಚ್ಛೆ/ ಆಯ್ಕೆ ದಾಖಲಿಸಿಕೊಳ್ಳಬೇಕು. ಇದು ಕೊನೆಯ ಅವಕಾಶ. ಪುನಃ ಸಮಯ ವಿಸ್ತರಣೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Edited By :
PublicNext

PublicNext

08/09/2025 08:36 pm

Cinque Terre

12.31 K

Cinque Terre

0

ಸಂಬಂಧಿತ ಸುದ್ದಿ