ಶಿಡ್ಲಘಟ್ಟ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಡ್ಲಘಟ್ಟ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ನಗರ ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿ-ಯುವ ಕ್ರೀಡಾಪಟುಗಳು ಅಥ್ಲೆಟಿಕ್ಸ್, ಆಟೋಟ ಹಾಗೂ ಹಲವು ಕ್ರೀಡೆಗಳಲ್ಲಿ ತಮಗೆ ತಾವೇ ಸವಾಲು ಹಾಕಿಕೊಂಡು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಗೆಲುವು ಸಾಧಿಸಿದವರು ಬಹುಮಾನ ಪಡೆದುಕೊಂಡರು.
ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ದೇವೇಂದ್ರಪ್ಪ ಮಾತನಾಡಿ, ಈ ಬಾರಿ ನಮ್ಮ ಶಿಡ್ಲಘಟ್ಟದಲ್ಲಿ ಕ್ರೀಡಾಕೂಟ ಆಯೋಜನೆಯಾಗಿರುವುದು ಸಂತಸದ ಸಂಗತಿ. ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಮೊದಲ ಬಾರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ. ಇದರಿಂದ ಕ್ರೀಡಾಪಟುಗಳಿಗೆ ನೇರ ಸೌಲಭ್ಯಗಳು ತಲುಪುವ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಕ್ರೀಡೆಯಲ್ಲಿ ಸಂಪೂರ್ಣ ತೊಡಗಿಸಿಕೊಂಡು ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
PublicNext
08/09/2025 08:44 pm