", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/405356-1757345073-saaa.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಸರ್ಕಾರ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಿಸಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತದೆ. ಶಿಕ್ಷಣ ಇಲಾಖೆಯು ಪ್ರತಿ ...Read more" } ", "keywords": "Government school enrollment decline, Karnataka education system, school admissions drop, government spending on education, education infrastructure, student enrollment issues, government school challenges. ", "url": "https://dashboard.publicnext.com/node" } ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಕುಸಿತ: ಕೋಟಿ, ಕೋಟಿ ಖರ್ಚು ಮಾಡಿದರೂ ಹೆಚ್ಚುತ್ತಿಲ್ಲ ಪ್ರಮಾಣ..!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಕುಸಿತ: ಕೋಟಿ, ಕೋಟಿ ಖರ್ಚು ಮಾಡಿದರೂ ಹೆಚ್ಚುತ್ತಿಲ್ಲ ಪ್ರಮಾಣ..!

ಹುಬ್ಬಳ್ಳಿ: ಸರ್ಕಾರ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಿಸಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತದೆ. ಶಿಕ್ಷಣ ಇಲಾಖೆಯು ಪ್ರತಿ ವರ್ಷ ಹಲವು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಆದ್ರೆ, ನಿರೀಕ್ಷಿತ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿಲ್ಲ. ಕೋಟಿ ಕೋಟಿ ಖರ್ಚು ಮಾಡಿದ್ರೂ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.

ಧಾರವಾಡ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ, ನಿರೀಕ್ಷಿತ ಯಶಸ್ಸು ಕಾಣದ ಜಾಗೃತಿ ಕಾರ್ಯಕ್ರಮಗಳು. ಮುಚ್ಚುವ ಹಂತ ತಲುಪಿದ ಸರ್ಕಾರಿ ಶಾಲೆಗಳು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಪ್ರವೇಶ ಶುಲ್ಕ, ಬಟ್ಟೆ, ಶೂ, ಸಾಕ್ಸ್, ಬಿಸಿಯೂಟ, ಹಾಲು, ಮೊಟ್ಟೆ ಹೀಗೆ ವಿವಿಧ ಸೌಲಭ್ಯಗಳನ್ನೂ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ನೀಡಿದ್ರೂ ನಗರ ಪ್ರದೇಶಗಳ ವಿದ್ಯಾರ್ಥಿ ಪೋಷಕರಲ್ಲಿ ಮಾತ್ರ ಖಾಸಗಿ ಶಾಲೆಗಳ ವ್ಯಾಮೋಹ ಕಡಿಮೆ ಆಗುತ್ತಿಲ್ಲ.

ಹೌದು.. ಗ್ರಾಮೀಣ ಭಾಗದಲ್ಲಿ ಖಾಸಗಿ ಶಾಲೆಗಳು ದೂರವಿರುವ ಕಾರಣ ಹಾಗೂ ಉತ್ತಮ ಸರ್ಕಾರಿ ಶಾಲೆ, ಕಟ್ಟಡಗಳ ಸ್ಥಿತಿ, ಶಿಕ್ಷಕರ ಬದ್ಧತೆಯ ಪರಿಣಾಮ, ಆರ್ಥಿಕವಾಗಿ ತೀರಾ ಕೆಳಮಟ್ಟದಲ್ಲಿ ಇರುವ ಕುಟುಂಬದವರು ಮಾತ್ರ ಸರ್ಕಾರಿ ಶಾಲೆಗಳಿಗೆ ಅನಿವಾರ್ಯವಾಗಿ ಮಕ್ಕಳನ್ನು ದಾಖಲಿಸುತ್ತಾರೆ. 2025-26 ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿವರೆಗೆ ದಾಖಲಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 3,13,935. ಈ ಪೈಕಿ ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು 1,23,184. ಕಳೆದ ವರ್ಷಕ್ಕೆ ಹೋಲಿಸಿದರೆ 11,290 ಮಕ್ಕಳ ದಾಖಲಾತಿ ಕಡಿಮೆ ಆಗಿದೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಕುಸಿತ ಉಂಟಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.

ಧಾರವಾಡ ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸೇರಿ ಜಿಲ್ಲೆಯಲ್ಲಿ ಒಟ್ಟು 1,526 ಶಾಲೆಗಳಿವೆ. ಇವುಗಳಲ್ಲಿ 735 ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 112 ಸರ್ಕಾರಿ ಪ್ರೌಢಶಾಲೆಗಳು ಇವೆ. ಆದ್ರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಲ್ಲ, ದಾಖಲಾತಿಗೆ ಪೋಷಕರನ್ನು ಸಾಲುಗಟ್ಟಿಸಬಲ್ಲ ಸರ್ಕಾರಿ ಶಾಲೆಗಳು ತೀರಾ ವಿರಳ. ಜಿಲ್ಲೆಯ 2,528 ಸರ್ಕಾರಿ ಶಾಲಾ ಕೊಠಡಿಗಳ ಪೈಕಿ 1,490 ಕೊಠಡಿಗಳು ಮಾತ್ರ ಸುಸ್ಥಿಯಲ್ಲಿವೆ. ಉಳಿದಂತೆ 259 ಶಾಲಾ ಕೊಠಡಿಗಳು ಬಾಗಿಲು, ಶೌಚಾಲಯ, ಕಿಟಕಿ, ಗೋಡೆ, ವಿದ್ಯುತ್ ಸೇರಿ ಸಣ್ಣಪುಟ್ಟ ದುರಸ್ತಿಗೆ ಬಂದಿವೆ. 580 ಶಾಲಾ ಕೊಠಡಿಗಳು ಹೆಚ್ಚಿನ ಪ್ರಮಾಣದಲ್ಲಿ ದುರಸ್ತಿ ಆಗಬೇಕಿದೆ. 173 ಶಾಲಾ ಕೊಠಡಿಗಳು ಅಪಾಯಕಾರಿ ಸ್ಥಿತಿಯಲ್ಲಿದ್ದರಿಂದ ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ಮೊರೆ ಹೋಗುವಂತಾಗಿದೆ.

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯಲು ಗ್ರಾಮೀಣ ಭಾಗಗಳಲ್ಲಿ ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳ ಸಹಕಾರದೊಂದಿಗೆ ಶಿಕ್ಷಕರು, ವಿವಿಧ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಅಲ್ಲದೆ, ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಲು ಈಗಲೂ ಅವಕಾಶ ಕಲ್ಪಿಸಿದೆ. ಆದ್ರೆ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಬೇಕೆಂದರೆ ವಿದ್ಯಾರ್ಥಿ ಪೋಷಕರು ಮನಸ್ಸು ಮಾಡಬೇಕಷ್ಟೇ.

ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Vinayak Patil
Kshetra Samachara

Kshetra Samachara

08/09/2025 08:57 pm

Cinque Terre

33.13 K

Cinque Terre

8

ಸಂಬಂಧಿತ ಸುದ್ದಿ