", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/405356-1757347407-kallu.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ಮದ್ದೂರಿನ ಚೆನ್ನೇಗೌಡ ಬಡಾವಣೆಯ ಗಣೇಶೋತ್ಸವ ಮೆರವಣಿಗೆಗೆ ಮಸೀದಿಯಿಂದ ಕಲ್ಲು ತೂರಾಟ ಸಂಪೂರ್ಣ ಪೂರ್ವ ನಿಯೋಜಿತವಾಗಿದ್ದು, ಗಲಭೆ ಸೃಷ್...Read more" } ", "keywords": "Maddur case, Hindu Janjagruti Samiti demand action, Goonda Act implementation, culprits to be punished, Hindu organization protests, Karnataka law and order issue, Maddur incident sparks outrage", "url": "https://dashboard.publicnext.com/node" }
ಮಂಗಳೂರು: ಮದ್ದೂರಿನ ಚೆನ್ನೇಗೌಡ ಬಡಾವಣೆಯ ಗಣೇಶೋತ್ಸವ ಮೆರವಣಿಗೆಗೆ ಮಸೀದಿಯಿಂದ ಕಲ್ಲು ತೂರಾಟ ಸಂಪೂರ್ಣ ಪೂರ್ವ ನಿಯೋಜಿತವಾಗಿದ್ದು, ಗಲಭೆ ಸೃಷ್ಟಿಸಲೆಂದೇ ಈ ಷಡ್ಯಂತ್ರ ರೂಪಿಸಲಾಗಿದೆ. ಈ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಲ್ಲಿ ಕಲ್ಲು ತೂರಾಟ ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಹಿಂದೂ ಅಂಗಡಿಗಳ ಮೇಲೆ ಹಾಕಿ ಕೋಟ್ಯಾಂತರ ರೂಪಾಯಿ ನಷ್ಟ ಮಾಡಲಾಗಿತ್ತು. ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಎಲ್ಲಾ ಗಣೇಶ ಮಂಡಳಿಯು ಸುರಕ್ಷತಾ ಭದ್ರತೆ ಒದಗಿಸಲು ಮನವಿ ಮಾಡಿದ ಬಳಿಕವೂ ಗಣೇಶೋತ್ಸವ ಮೆರವಣಿಗೆ ಮೇಲೆ ಮಾರಣಾಂತಿಕ ಆಕ್ರಮಣ ಅತ್ಯಂತ ಖಂಡನೀಯ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ ? ಸಾರ್ವಜನಿಕ ಗಣೇಶೋತ್ಸವ, ನವರಾತ್ರಿ, ರಾಮನವಮಿ, ಹನುಮಾನ್ ಜಯಂತಿ ಪ್ರತಿಯೊಂದು ಮೆರವಣಿಗೆ ಮೇಲೆಯೂ ಕಲ್ಲು ತೂರಾಟ ಆಗುತ್ತಿದೆ. ಇದರಿಂದ ಗಮನಕ್ಕೆ ಬರುವುದೇನೆಂದರೆ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದ ಬಹುಸಂಖ್ಯಾತ ಹಿಂದೂಗಳ ಮೇಲೆ ಮಾರಣಾಂತಿಕ ಆಕ್ರಮಣ ಆಗುತ್ತಿದೆ. ಆದುದರಿಂದ ರಾಜ್ಯ ಸರ್ಕಾರವು ಈ ಕೃತ್ಯಕ್ಕೆ ಕಾರಣಕರ್ತರಾದವರ ಮೇಲೆ ತಕ್ಷಣ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಬೇಕು. ರಾಜ್ಯಾದ್ಯಂತ ಇನ್ನೂ ಅನೇಕ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಬಾಕಿಯಿದ್ದು ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ಸಮಿತಿ ಆಗ್ರಹಿಸಿದೆ.
PublicNext
08/09/2025 09:33 pm