ಚಿಂತಾಮಣಿ : ಚಿಂತಾಮಣಿ - ಬೆಂಗಳೂರು ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ತಳಗವಾರ ಗೇಟ್ ಬಳಿ ಸಂಭವಿಸಿದೆ.
ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿರುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಬೈಕ್ ಸವಾರ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಗಮನಿಸಿದ ಟ್ರ್ಯಾಕ್ಟರ್ ಚಾಲಕ ಅಲ್ಲಿಂದ ನಿಧಾನವಾಗಿ ಎಸ್ಕೇಪ್ ಆಗುತ್ತಾನೆ.
ಹೆಚ್ ಕ್ರಾಸ್ ಕಡೆಯಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಬೈಕ್ ಸವಾರ, ಕೋಲಾರ ತಾಲ್ಲೂಕಿನ ಚನ್ನಸಂದ್ರ ಗ್ರಾಮದ 50 ವರ್ಷದ ಚಂಚಲಪ್ಪ ಎಂದು ಗುರುತಿಸಲಾಗಿದೆ. ಇನ್ನು ಘಟನೆಯನ್ನು ತಾಲೂಕಿನ ಗ್ರಾಮಾಂತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಲಾಗಿದೆ.
ವರದಿ: ಚಿಕ್ಕತೇಕಹಳ್ಳಿ ಡಿ.ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
08/09/2025 10:28 pm