", "articleSection": "Infrastructure", "image": { "@type": "ImageObject", "url": "https://prod.cdn.publicnext.com/s3fs-public/474799-1757351782-yutube1920.03_11_54_07.Still3751.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Pavan.Badiger" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು ಉತ್ತರ ನಗರ ಪಾಲಿಕೆ ಆ...Read more" } ", "keywords": "bengaluru, jakkur railway flyover, completion in 3 months, instruction by pommala sunil kumar, infrastructure project, city development, bengaluru news, kannada headline ", "url": "https://dashboard.publicnext.com/node" }
ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉತ್ತರ ನಗರ ಪಾಲಿಕೆಯಲ್ಲಿ ಸೋಮವಾರ ಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ಜಕ್ಕೂರು ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಭೂಸ್ವಾಧೀನ ಸಮಸ್ಯೆ ಬಗೆಹರಿದಿದೆ. ಎರಡೂ ಕಡೆಯ ರ‍್ಯಾಂಪ್ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಕ್ಕೂರು ರೈಲ್ವೇ ಸಮಾಂತರ ರಸ್ತೆ (ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ರಸ್ತೆ) ಪರಿಶೀಲಿಸಿ, ಹೊಸ ರಸ್ತೆಯ ನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಿ ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು.
ರೈಲ್ವೇ ಸಮಾಂತರ ರಸ್ತೆಯಾದ ಎಂ.ಸಿ.ಇ.ಸಿ.ಹೆಚ್.ಎಸ್ ಹಂತ-2, ಮೇಸ್ತ್ರಿಪಾಳ್ಯ-ರಾಚೇನಹಳ್ಳಿ ಲಿಂಕ್ ರಸ್ತೆಗಳಲ್ಲಿ ಡಾಂಬರೀಕರಣ ಮತ್ತು ಎರಡೂ ಬದಿಯ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದರು.
ರಾಯಲ್ ಎನ್‌ಕ್ಲೇವ್ ಲೇಔಟ್‌ನಲ್ಲಿ ಮನೆ-ಮನೆ ಕಸ ಸಂಗ್ರಹಣಾ ಕಾರ್ಯವನ್ನು ಪರಿಶೀಲಿಸಿ, ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಜೊತೆಗೆ ಪ್ರತಿನಿತ್ಯ ಆಟೋ ಟಿಪ್ಪರ್ ಗಳನ್ನು ಮನೆ-ಮನೆಗೆ ಭೇಟಿ ನೀಡಿ ಕಸ ಸಂಗ್ರಹಿಸಲು ಸೂಚನೆ ನೀಡಿದರು.
PublicNext
08/09/2025 10:46 pm