", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/457940_1757380370_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RohitMadakeri" }, "editor": { "@type": "Person", "name": "9535981195" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸೋಮವಾರಪೇಟೆ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶುಶ್ರೂಷಣಾಧಿಕಾರಿ ಒಬ್ಬರು ಶ್ರೀಕುಮಾರಲಿಂಗೇಶ್ವರ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರು ಹಾಗು ಬ...Read more" } ", "keywords": "Node", "url": "https://dashboard.publicnext.com/node" }
ಸೋಮವಾರಪೇಟೆ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶುಶ್ರೂಷಣಾಧಿಕಾರಿ ಒಬ್ಬರು ಶ್ರೀಕುಮಾರಲಿಂಗೇಶ್ವರ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರು ಹಾಗು ಬೆಟ್ಟದಳ್ಳಿ ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಟ್ಟದಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಸಂಪತ್, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಿರೀಶ್ ಅವರುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಶುಶ್ರೂಷಣಾಧಿಕಾರಿ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಅರೋಗ್ಯಾಧಿಕಾರಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಅಧಿಕಾರಿಯ ಸಮಜಾಯಿಷಿಕೆಯಿಂದ ಅಕ್ರೋಶಗೊಂಡ ಪ್ರತಿಭಟನಾಕಾರರು, ಗ್ರಾಮದ ಜನರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಲು ಹಿಂಜರಿಯುತ್ತಿದ್ದಾರೆ. ಶುಶ್ರೂಷಣಾಧಿಕಾರಿ ಅನ್ನು ವರ್ಗಾವಣೆ ಮಾಡದಿದ್ದರೆ, ಆಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನಾಕಾರರು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ನರ್ಸ್ ಅವರನ್ನು ವರ್ಗಾವಣೆಗೊಳಿಸಲಾಗುವುದು ಎಂದು ಡಿಎಚ್‌ಒ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಡಾ.ಮಂತರ್‌ಗೌಡ, ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು. ಸೂಕ್ತ ತನಿಖೆ ನಡೆಸಿ ಒಂದು ವಾರದ ಒಳಗೆ ಮಾಹಿತಿ ನೀಡುವಂತೆ ಡಿಎಚ್‌ಒ ಅವರಿಗೆ ಸೂಚಿಸಿದರು.
Kshetra Samachara
09/09/2025 06:42 am