ತುಮಕೂರು : ನೂತನ ಕೃಷಿ ತಂತ್ರಜ್ಞಾನ, ಪಶು ಪಾಲನೆ ಹಾಗೂ ಹೈನುಗಾರಿಕೆಯಲ್ಲೂ ತೊಡಗಿಸುಕೊಳ್ಳುವಂತೆ ರೈತರನ್ನು ಪ್ರೋತ್ಸಾಹಿಸುವಲ್ಲಿ ಕೃಷಿ ಸಖಿ ಹಾಗೂ ಪಶು ಸಖಿಯರ ಪಾತ್ರ ಮಹತ್ವದ್ದಾಗಿದೆ ಎಂದು ತುಮಕೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ ಸ್ವಾಮಿ ಅವರು ತಿಳಿಸಿದರು.
ತುಮಕೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ 41 ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಸಖಿ ಹಾಗೂ ಪಶು ಸಖಿಯರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ರೈತರಿಗೆ ಕೃಷಿಯೊಂದಿಗೆ ಅರಣ್ಯ ಕೃಷಿ, ತೋಟಗಾರಿಕೆ, ಪಶು ಪಾಲನೆ ಹಾಗೂ ಹೈನುಗಾರಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ರೈತರನ್ನು ಪ್ರೋತ್ಸಾಹಿಸಬೇಕು. ಜೊತೆಗೆ ನರೇಗಾ ಯೋಜನೆಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ಲೋಕೇಶ್ ಕುಮಾರ್ ಬಿ., ಸಹಾಯಕ ಕೃಷಿ ನಿರ್ದೇಶಕ ದಿವಾಕರ್, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ನರೇಗಾ ತಾಂತ್ರಿಕ ಸಿಬ್ಬಂದಿ, ಎನ್.ಆರ್.ಎಲ್.ಎಂ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಮೇಶ್ ಕೆ.ಆರ್., ವಲಯ ಮೇಲ್ವಿಚಾರಕ ಕಾಂತರಾಜು ಸಿ.ಎಸ್., ಕೃಷಿ ಸಖಿ, ಪಶು ಸಖಿಯರು ಸೇರಿದಂತೆ ಇತರೆ ಸಿಬ್ಬಂದಿ ಹಾಜರಿದ್ದರು
Kshetra Samachara
09/09/2025 07:41 am