", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/229640-1757387159-hbl.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Sridhar Pujar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಬಳಿಕ ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹ...Read more" } ", "keywords": "hubballi basava vasati scheme, basava vasati housing issue, woman denied basava vasati house, ingalahalli gram panchayat news, hubballi housing scheme problem, basava vasati yojana dispute, hubballi rural development issue, basava vasati house allocation, karnataka housing scheme issue, hubballi gram panchayat news", "url": "https://dashboard.publicnext.com/node" }
ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಬಳಿಕ ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬವರು ಆಗಸ್ಟ್ 19 ರಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಈ ವಿಷಯಕ್ಕೆ ಮನವಿ ಸಲ್ಲಿಸಿದ್ದಾರೆ.
2023-24ನೇ ಸಾಲಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ, ಗ್ರಾಮ ಸಭೆಯಲ್ಲಿ ರೇಷ್ಮಾ ದುಗ್ಗಾನಟ್ಟಿ ಅವರನ್ನು ಬಸವ ವಸತಿ ಯೋಜನೆಗೆ ಆಯ್ಕೆ ಮಾಡಿ, ಕೊನೆಗೆ ಮನೆ ನಿರ್ಮಾಣ ಪಟ್ಟಿಯಿಂದ ಕೈ ಬಿಟ್ಟು, ಬೇರೊಬ್ಬರ ಮನೆ ಜಿಪಿಎಸ್ ಮಾಡಿದ್ದಾರೆ ಎಂಬ ಆರೋಪ ಎತ್ತಿದ್ದಾರೆ.
ಮುಖ್ಯವಾಗಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ ಅವರಿಗೆ ಮನವಿ ಸಲ್ಲಿಸಿದ ಮಹಿಳೆ, 2023-24ನೇ ಇಂಗಳಹಳ್ಳಿ ಗ್ರಾಮ ಸಭೆಯಲ್ಲಿ ಬಸವ ವಸತಿ ಯೋಜನೆಯಡಿ ತನ್ನನ್ನು ವಸತಿ ಫಲಾನುಭವಿ ಅಂತಾ ಆಯ್ಕೆ ಮಾಡಿ ಚಿತ್ರೀಕರಿಸಿದ ವಿಡಿಯೋ ಸಾಕ್ಷ್ಯ ನನ್ನ ಬಳಿ ಇದೆ ಎಂದು ಉಲ್ಲೇಖಿಸಿದ್ದಾರೆ.
ಒಟ್ಟಾರೆ ಗ್ರಾಮ ಪಂಚಾಯಿತಿಯಲ್ಲಿ ನ್ಯಾಯ ಸಿಗದೆ ತಾಲೂಕು ಪಂಚಾಯಿತಿ ಮೆಟ್ಟಿಲು ಏರಿದ ಮಹಿಳೆ, ಇದೀಗ ಮಾಧ್ಯಮಕ್ಕೆ ಮಾಹಿತಿ ನೀಡಿ, ನಾವು ಕಡು ಬಡವರು ನ್ಯಾಯ ಕೊಡಿಸಿ ಎಂದಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಏನು ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.
-ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
Kshetra Samachara
09/09/2025 08:42 am