", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1757391034-Untitled-design---2025-09-09T094219.229.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷಗಳ ನಡುವ...Read more" } ", "keywords": "vice president election, india, jagdeep dhankhar resignation, cp radhakrishnan, b sudarshan reddy, nda candidate, india alliance candidate, brs, bjd, narendra modi voting, parliament members voting, vice president election result", "url": "https://dashboard.publicnext.com/node" }
ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ.
ಆಡಳಿತ-ವಿರೋಧ ಪಕ್ಷಗಳ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ ಅಭ್ಯರ್ಥಿ ಮತ್ತು ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹಾಗೂ ಇಂಡಿ ಅಭ್ಯರ್ಥಿ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ಮಂಗಳವಾರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಮತದಾನ ಮಾಡಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಫಲಿತಾಂಶವನ್ನು ಸಂಜೆ ಪ್ರಕಟಿಸಲಾಗುವುದು. ಬಹುತೇಕ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರ ಗೆಲುವು ಖಚಿತವಾಗಿದೆ ಎಂದು ರಾಜಕೀಯ ವಲಯದಲ್ಲಿ ಮಾತು ಹರಿದಾಡುತ್ತಿದೆ.
ಈ ಮಧ್ಯೆ, ಬಿಆರ್‌ಎಸ್ ಹಾಗೂ ಬಿಜೆಡಿ ಪಕ್ಷಗಳು ಚುನಾವಣೆಯಿಂದ ದೂರ ಉಳಿಯುತ್ತಿರುವುದರಿಂದ ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಅವರ ಗೆಲುವು ಇನ್ನಷ್ಟು ಖಚಿತವಾಗಿದೆ.
ಯೂರಿಯಾ ಕೊರತೆಯಿಂದಾಗಿ ತೆಲಂಗಾಣ ರೈತರು ಎದುರಿಸುತ್ತಿರುವ ಸಮಸ್ಯೆಯನ್ನು ಎತ್ತಿ ತೋರಿಸಲು ಮತದಾನದಿಂದ ದೂರ ಉಳಿಯಲು ನಿರ್ಧರಿಸಿದ್ದಾಗಿ ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ. ರಾಮರಾವ್ ತಿಳಿಸಿದ್ದಾರೆ. ಅದೇ ವೇಳೆ, ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿ ಬಣ ಎರಡರಿಂದಲೂ ಸಮಾನ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮತದಾನದಿಂದ ದೂರ ಉಳಿಯುವುದಾಗಿ ಬಿಜೆಡಿ ಘೋಷಿಸಿದೆ.
PublicNext
09/09/2025 09:40 am