ಕೋಲಾರ - ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಗೆ ಕೂಡಲೇ ಸಚಿವರನ್ನು ನೇಮಕ ಮಾಡಿ ಮುಂದಿನ ವಾಲ್ಮೀಕಿ ಜಯಂತಿಯನ್ನು ಅವರ ಅಧ್ಯಕ್ಷತೆಯಲ್ಲಿಯೇ ನಡೆಸುವಂತೆ ಒತ್ತಾಯಿಸಿ ಸೆ.10 ರಂದು ಬೆಂಗಳೂರಿನ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಕೋಟೆ ಶ್ರೀನಿವಾಸ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸುಮಾರು ಎಂಟು ತಿಂಗಳ ಹಿಂದೆ ಸಚಿವರಾಗಿದ್ದ ಬಿ.ನಾಗೇಂದ್ರ ಅವರನ್ನು ಕುತಂತ್ರದಿಂದ ಇ.ಡಿ ದಾಳಿಯಲ್ಲಿ ಸಿಲುಕಿಸಿ ಕೆಳಗಿಳಿಸಲಾಯಿತು. ಅಂದಿನಿಂದಲೂ ಸಚಿವರ ಸ್ಥಾನವು ಖಾಲಿಯಿದೆ. ಸಾಕಷ್ಟು ಬಾರಿ ಸಮುದಾಯದ ಮುಖಂಡರು ಒತ್ತಾಯ ಮಾಡಲಾಗಿದೆ ಎಂದರು.
ರಾಜ್ಯದ ಎಸ್‌ಟಿ ಮೀಸಲಿನ 14 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಗೆದ್ದಿದ್ದು, ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರವನ್ನು ವಾಲ್ಮೀಕಿ ಸಮುದಾಯವು ವಹಿಸಿದೆ ಎಂಬುದನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.
Kshetra Samachara
09/09/2025 12:09 pm