", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/29545520250909122923filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarNavalagunda" }, "editor": { "@type": "Person", "name": "9740080658" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವಲಗುಂದ: ಪ್ರಸ್ತುತ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಹದಾಯಿ ಕಳಸಾ ಬಂಡೂರಿ ರೈತ ಹ...Read more" } ", "keywords": "Node", "url": "https://dashboard.publicnext.com/node" }
ನವಲಗುಂದ: ಪ್ರಸ್ತುತ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟಗಾರರು ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಕೃಷ್ಣಅರೇರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈತ ಮುಖಂಡ ಲೋಕನಾಥ ಹೆಬಸೂರ ಮಾತನಾಡಿ, ಕಳೆದ ವರ್ಷ ರೈತರು ತುಂಬಿದ ಬೆಳೆ ವಿಮೆ ಹಣ ಇನ್ನೂ ಬಿಡುಗಡೆಯಾಗಿಲ್ಲ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದರಿಂದ ರೈತರು ಬೆಳೆದ ಹೆಸರು, ಉದ್ದು, ಈರುಳ್ಳಿ ಸೇರಿದಂತೆ ಅನೇಕ ಬೆಳೆಗಳು ಬಹುತೇಕ ಹಾಳಾಗಿವೆ. ಬೆಳೆ ಹಾನಿ ಅನುಭವಿಸಿದ ರೈತರಿಗೆ ಪರಿಹಾರ ವಿತರಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಸರ್ಕಾರ ರೈತರ ಸಂಕಷ್ಟವನ್ನು ಅರಿತುಕೊಂಡು ಎಕರೆಗೆ ತಲಾ ₹ 25 ಸಾವಿರ ಪರಿಹಾರ ವಿತರಿಸಬೇಕು. ಜತೆಗೆ ಅತಿವೃಷ್ಟಿಯಿಂದ ಅಳಿದುಳಿದ ಹೆಸರು ಬೆಳೆಯನ್ನು ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲು ಕೂಡಲೇ ಖರೀದಿ ಕೇಂದ್ರವನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಹೆಬಸೂರ ರೈತರ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಈ ವೇಳೆ ರಘುನಾಥ ನಡುವಿನಮನಿ, ವೀರಯ್ಯ ಹಿರೇಮಠ, ಆರ್.ಎಂ.ನಾಯ್ಕರ, ಜಿ.ಎಚ್.ದೊಡ್ಡಮನಿ, ಎಸ್.ಎಂ.ಸಂಶಿ, ಬಿ.ಜಿ.ಹೊಸಮನಿ, ಬಸಪ್ಪ ಹಡಪದ ಇತರರು ಇದ್ದರು.
Kshetra Samachara
09/09/2025 12:29 pm