", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1757402136-WhatsApp-Image-2025-09-09-at-12.41.31-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KarthikUdupi" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ, : ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್‌ಶಾಪ್‌ನಲ್ಲಿ ಸೋಮವಾರ ರಾತ್ರಿ ನಡೆದ ಕಳ್ಳತನದಿಂದಾಗಿ ಆಭರಣ ವ್ಯಾಪಾರಿಗಳು ಆತಂಕಕ್...Read more" } ", "keywords": ""gold theft, silver jewelry stolen, 60 lakh rupees worth jewelry stolen, thieves steal gold and silver, jewelry theft case, police investigation, thieves target gold and silver" ", "url": "https://dashboard.publicnext.com/node" }
ಉಡುಪಿ, : ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್‌ಶಾಪ್‌ನಲ್ಲಿ ಸೋಮವಾರ ರಾತ್ರಿ ನಡೆದ ಕಳ್ಳತನದಿಂದಾಗಿ ಆಭರಣ ವ್ಯಾಪಾರಿಗಳು ಆತಂಕಕ್ಕೊಳಗಾಗಿದ್ದಾರೆ.
'ವೈಭವ್ ರಿಫೈನರ್' ಎಂಬ ಹೆಸರಿನ ಅಂಗಡಿಗೆ ನಕಲಿ ಬೀಗದ ಸಹಾಯದಿಂದ ನುಗ್ಗಿದ ಕಳ್ಳರು, ಡ್ರಾಯರ್‌ನ ಬೀಗವನ್ನು ಮುರಿದು ಸುಮಾರು 600 ಗ್ರಾಂ ತೂಕದ ಚಿನ್ನದ ಗಟ್ಟಿ, ಗೋಲ್ಡ್ ಲಿಕ್ವಿಡ್ ಸೇರಿದಂತೆ ಅಂದಾಜು 60 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ದೋಚಿದ್ದಾರೆ.ಈ ಹಿಂದೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೇ ಕೃತ್ಯಕ್ಕೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಶಂಕಿತ ಕಾರ್ಮಿಕರ ಕುರಿತು ತನಿಖೆ ಆರಂಭಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ಲಭಿಸಿದ ತಕ್ಷಣ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Kshetra Samachara
09/09/2025 12:45 pm