", "articleSection": "Crime,Viral", "image": { "@type": "ImageObject", "url": "https://prod.cdn.publicnext.com/s3fs-public/463655-1757405482-manjunath---2025-09-09T134112.762.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಠ್ಮಂಡು: ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ್ದ ನೇಪಾಳ ಸರ್ಕಾರ, ಯುವ ಸಮೂಹದ ಭಾರೀ ಪ್ರತಿಭಟನೆಗಳ ಬೆನ್ನಲ್ಲೇ ಕೊನೆಗೆ ತನ್ನ ನಿರ್ಧಾರವನ್ನು ವ...Read more" } ", "keywords": "nepal social media ban lifted, nepal government u turn, nepal protests 19 dead, nepal home minister resignation, nepal social media ban news, nepal internet freedom protest, nepal violence over social media ban, nepal parliament unrest, nepal youth protest news, nepal social media restriction update", "url": "https://dashboard.publicnext.com/node" } 19 ಮಂದಿ ಸಾವು – ಗೃಹ ಸಚಿವರ ರಾಜೀನಾಮೆ ಬಳಿಕ ಸಾಮಾಜಿಕ ಜಾಲತಾಣ ನಿಷೇಧ ವಾಪಸ್‌!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

19 ಮಂದಿ ಸಾವು – ಗೃಹ ಸಚಿವರ ರಾಜೀನಾಮೆ ಬಳಿಕ ಸಾಮಾಜಿಕ ಜಾಲತಾಣ ನಿಷೇಧ ವಾಪಸ್‌!

ಕಠ್ಮಂಡು: ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ್ದ ನೇಪಾಳ ಸರ್ಕಾರ, ಯುವ ಸಮೂಹದ ಭಾರೀ ಪ್ರತಿಭಟನೆಗಳ ಬೆನ್ನಲ್ಲೇ ಕೊನೆಗೆ ತನ್ನ ನಿರ್ಧಾರವನ್ನು ವಾಪಸ್ ಪಡೆದುಕೊಂಡಿದೆ.

ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ತಕ್ಷಣ ತೆರವುಗೊಳಿಸಬೇಕು ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯಿಂದ ಕಠ್ಮಂಡು ಸೇರಿದಂತೆ ನೇಪಾಳದ ಅನೇಕ ಯುವಕರು ಬೃಹತ್ ಪ್ರತಿಭಟನೆ ನಡೆಸಿದ್ದರು.

ಶಾಂತವಾಗಿ ಆರಂಭವಾದ ಈ ಪ್ರತಿಭಟನೆ ಬಳಿಕ ಹಿಂಸಾಚಾರಕ್ಕೆ ತಿರುಗಿ, 19 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರದ ನಡುವೆ ನೈತಿಕ ಹೊಣೆ ಹೊತ್ತು, ನೇಪಾಳ ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಗೃಹ ಸಚಿವ ರಮೇಶ್ ಲೇಖಕ್ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿದ್ದ ಲೇಖಕ್ ಅವರ ರಾಜೀನಾಮೆ ರಾಜಕೀಯ ಬಿಕ್ಕಟ್ಟನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆಗೆ ಆದೇಶಿಸಲಾಗಿದ್ದು, ಕಠ್ಮಂಡುವಿನ ಸಂಸತ್ತಿನ ಸಂಕೀರ್ಣ ಹಾಗೂ ನ್ಯೂ ಬನೇಶ್ವರ್ ಪ್ರದೇಶದಲ್ಲಿ ಸೈನಿಕರನ್ನು ನಿಯೋಜಿಸಲಾಗಿದೆ. ರಸ್ತೆಗಳನ್ನು ಸೇನೆ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಾಪಕ ಪ್ರತಿಭಟನೆ ಹಾಗೂ ಹಿಂಸಾಚಾರದ ನಂತರ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರ ಹಿಂಪಡೆಯುವುದಾಗಿ ನೇಪಾಳ ಸರ್ಕಾರ ಘೋಷಿಸಿದೆ.

Edited By :
PublicNext

PublicNext

09/09/2025 01:41 pm

Cinque Terre

41.65 K

Cinque Terre

0

ಸಂಬಂಧಿತ ಸುದ್ದಿ