", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/229640-1757406088-bali.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ರಾಯಲ್ ಓಕ್ ಮುಂಭಾಗದಲ್ಲಿ ಹೆದ್ದಾರಿ ರಸ್ತೆ ಹೊಂಡ ತಪ್ಪಿಸಲು ಯತ್ನಿಸಿ ಸ್ಕೂಟರ್ ನಿಯಂತ್ರಣ ತಪ್...Read more" } ", "keywords": "mangalore highway accident, mangalore scooter accident, scooter rider dies mangalore, lorry runs over scooter mangalore, mangalore road pothole accident, mangalore tragic accident, karnataka highway accident, pothole causes accident mangalore, mangalore traffic news, mangalore breaking news", "url": "https://dashboard.publicnext.com/node" }
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ರಾಯಲ್ ಓಕ್ ಮುಂಭಾಗದಲ್ಲಿ ಹೆದ್ದಾರಿ ರಸ್ತೆ ಹೊಂಡ ತಪ್ಪಿಸಲು ಯತ್ನಿಸಿ ಸ್ಕೂಟರ್ ನಿಯಂತ್ರಣ ತಪ್ಪಿ ಸವಾರೆ ಮಹಿಳೆ ರಸ್ತೆಯಲ್ಲಿ ಬಿದ್ದ ಪರಿಣಾಮ ಮಹಿಳೆಯ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಉಡುಪಿ ಮೂಲದ ಮಾದೇವಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಸ್ಕೂಟರ್‌ನಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು ಕೂಳೂರು ಬಳಿಯ ಹೆದ್ದಾರಿಯಲ್ಲಿ ಹೊಂಡ ತಪ್ಪಿಸಲು ಯತ್ನಿಸಿದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಮಹಿಳೆ ರಸ್ತೆಗೆ ಬಿದ್ದು ಘಟನೆ ಸಂಭವಿಸಿದೆ. ಅಪಘಾತದಿಂದ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಘಟನೆಯಿಂದಾಗಿ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ಹೊಂಡಗಳಿಂದ ಅನೇಕ ಅಪಘಾತಗಳು ಸಂಭವಿಸಿದ್ದು ಹೆದ್ದಾರಿ ಇಲಾಖೆ ನಿದ್ರಾವಸ್ಥೆಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದು ಕೂಡಲೇ ಹೆದ್ದಾರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತು ರಸ್ತೆ ಹೊಂಡಕ್ಕೆ ತಾತ್ಕಾಲಿಕ ತೇಪೆ ಕಾರ್ಯ ಆರಂಭಿಸಿದ್ದಾರೆ.
PublicNext
09/09/2025 01:51 pm