ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷ್ಣಮಠದ ರಾಜಾಂಗಣದಲ್ಲಿ ಸೆ.12ರಂದು 'ಭಾರತೀಯ ಜ್ಞಾನ ಪರಂಪರೆ' ಅಂತರಾಷ್ಟ್ರೀಯ ಸಮ್ಮೇಳನ

ಉಡುಪಿ: ಕೃಷ್ಣಮಠದ ರಾಜಾಂಗಣದಲ್ಲಿ ಸೆ.12ರಂದು 'ಭಾರತೀಯ ಜ್ಞಾನ ಪರಂಪರೆ' ಎನ್ನುವ ಅಂತರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಗೀತಾ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಪಾದರು, ಭಾರತೀಯ ಜ್ಞಾನ ಪರಂಪರೆಯನ್ನು ಇನ್ನಷ್ಟು ವಿಸ್ತರಿಸಲು ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್ ನಿಂದ ಮಾನವನ ಬುದ್ಧಿಶಕ್ತಿ ಕಡಿಮೆ ಬಳಕೆಯಾಗುತ್ತಿದೆ. ಹಾಗಾಗಿ ''ಶ್ರೇಷ್ಠ ಭಾರತ ಪುನಃ ಜಾಗೃತವಾಗಬೇಕು' ಎಂಬುದು ನಮ್ಮ ಉದ್ದೇಶ. ಭಾರತೀಯ ಜ್ಞಾನ ಪರಂಪರೆಯ ಚರ್ಚೆ, ವಿಷಯ ಮಂಡನೆ ಇತ್ಯಾದಿ ನಡೆಯಲಿದೆ ಎಂದರು.

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ, ನಿಟ್ಟೆ ವಿ ವಿ ಯ ಭಾರತೀಯ ಜ್ಞಾನ ವ್ಯವಸ್ಥೆ ವಿಭಾಗ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯ ಹಾಗೂ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಮಂಡಲೋತ್ಸವದ ಜ್ಞಾನ ಮಂಡಲೋತ್ಸವ ಪ್ರಯುಕ್ತ ಈ ಸಮ್ಮೇಳನ ನಡೆಯುತ್ತಿದೆ ಎಂದರು.

Edited By : Manjunath H D
PublicNext

PublicNext

09/09/2025 02:37 pm

Cinque Terre

10.36 K

Cinque Terre

0