ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೇಪಾಳದಲ್ಲಿ ಭುಗಿಲೆದ್ದ ಬಿಕ್ಕಟ್ಟು – ಪ್ರಧಾನಿ ಕೆ. ಪಿ. ಶರ್ಮಾ ಒಲಿ ರಾಜೀನಾಮೆ

ಕಠ್ಮಂಡು: ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿದ್ದು, ಪ್ರಧಾನಿ ಕೆ. ಪಿ. ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದಾಗಿ ವರದಿಯಾಗಿದೆ.

ಚೀನಾಪರ ನಿಲುವು ಹೊಂದಿರುವ ಒಲಿ ಇತ್ತೀಚೆಗೆ ಫೇಸ್ಬುಕ್, ಟ್ವಿಟ್ಟರ್, ಇನ್‌ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿದ್ದರು. ಈ ನಿರ್ಧಾರ ದೇಶಾದ್ಯಂತ ವ್ಯಾಪಕ ಪ್ರತಿಭಟನೆಯನ್ನು ಎಬ್ಬಿಸಿತು.

ಶಾಂತವಾಗಿ ಆರಂಭವಾದ ಪ್ರತಿಭಟನೆಗಳು ಕ್ರಮೇಣ ಸಂಘರ್ಷವಾಗಿ ಮಾರ್ಪಟ್ಟಿದ್ದು, ಇದೀಗ ಪ್ರತಿಭಟನಾಕಾರರು ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ರಾಜಧಾನಿ ಕಠ್ಮಂಡುವಿನ ಹಲವೆಡೆ ಪ್ರತಿಭಟನಾಕಾರರು "ಕೆಪಿ ಚೋರ್, ದೇಶ್ ಛೋಡ್" (ಕೆಪಿ ಕಳ್ಳ, ದೇಶ ಬಿಟ್ಟು ತೊಲಗಿ), "ಭ್ರಷ್ಟ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ" ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೆಲಡೆ ನಾಯಕರ ಮನೆ-ಕಚೇರಿಗಳ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಇದರಿಂದ ರಾಜಕೀಯ ಅಶಾಂತಿ ಇನ್ನಷ್ಟು ಗಂಭೀರ ಸ್ವರೂಪ ಪಡೆದಿದೆ. ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಒಲಿಯ ಸರ್ಕಾರದ ಅನೇಕ ಕ್ಯಾಬಿನೆಟ್ ಸಚಿವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪರಿಸ್ಥಿತಿ ಹದಗೆಟ್ಟಂತೆ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಗಂಭೀರ ಹಂತಕ್ಕೆ ತಲುಪಿದೆ.

Edited By :
PublicNext

PublicNext

09/09/2025 03:16 pm

Cinque Terre

17.39 K

Cinque Terre

12

ಸಂಬಂಧಿತ ಸುದ್ದಿ