ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಬೈಪಾಸ್ ರಸ್ತೆಯಲ್ಲಿ ಅಂಡರ್ ಪಾಸ್, ಸರ್ವೀಸ್ ರಸ್ತೆ ನಿರ್ಮಿಸುವಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಸೂಚನೆ

ಚಾಮರಾಜನಗರ : ನಗರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-948ರ ಬೈಪಾಸ್ ರಸ್ತೆಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕೆಲವು ಕಡೆಗಳಲ್ಲಿ ಹೆದ್ದಾರಿ ಬದಿಯಲ್ಲಿ ತುರ್ತಾಗಿ ಸರ್ವೀಸ್ ರಸ್ತೆ ನಿರ್ಮಾಣ ಮಾಡುವುದು ಸೇರಿದಂತೆ, ಹೆದ್ದಾರಿ ಬದಿಯ ಎರಡು ಕಡೆ ತಡೆಗೋಡೆ ನಿರ್ಮಿಸುವಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಇತ್ತೀಚೆಗೆ ನಗರದ ಗಾಳಿಪುರ ಬಡಾವಣೆ ಬಳಿ ಹಾದು ಹೋಗಿರುವ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ನಗರದ ಸೋಮವಾರಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆ ಸಮೀಪವಿರುವ ಹರದನಹಳ್ಳಿ ಬಳಿ ಚಾಮರಾಜನಗರಕ್ಕೆ ಬರಲು ಅನುಕೂಲವಾಗುವಂತೆ ಪ್ರತ್ಯೇಕ ಸರ್ವೀಸ್ ರಸ್ತೆ ನಿರ್ಮಾಣವಾಗಬೇಕು. ಅಲ್ಲದೇ ಗಾಳಿಪುರ ಬಡಾವಣೆಯಿಂದ ಕರಿವರದರಾಜಬೆಟ್ಟಕ್ಕೆ ತೆರಳಲು ಹೆದ್ದಾರಿಯನ್ನು ದಾಟಬೇಕು. ಈ ಸಂದರ್ಭದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಅಂಡರ್‌ಪಾಸ್ ನಿರ್ಮಾಣವಾಗಬೇಕು ಎಂದರು.

ಬಹುತೇಕ ಕಡೆಗಳಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಮಾಡುವಾಗ ಸರ್ವೀಸ್ ರಸ್ತೆಗಳನ್ನೇ ನಿರ್ಮಾಣ ಮಾಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಡಿಪಿಆರ್‌ನಲ್ಲಿ ಇದ್ದ ಹಾಗೇ ರಸ್ತೆ ನಿರ್ಮಾಣ ಮಾಡಲಾಗಿದೆ. ಹೊಸದಾಗಿ ಡಿಪಿಆರ್ ಮಾಡಿ ಆ ನಂತರ ಅಂಡರ್‌ಪಾಸ್ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದರು.

Edited By : PublicNext Desk
PublicNext

PublicNext

09/09/2025 03:33 pm

Cinque Terre

6.94 K

Cinque Terre

0

ಸಂಬಂಧಿತ ಸುದ್ದಿ