ಕೋಲಾರ : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವೇಳೆ ಒಕ್ಕಲಿಗ ಸಮುದಾಯದವರು ಜವಾಬ್ದಾರಿ ಹಾಗೂ ವಿವೇಚನೆಯಿಂದ ವಾಸ್ತಾಂಶದ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ದಾಖಲಾಗದಂತೆ ಎಚ್ಚರ ವಹಿಸಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು.
ಮುಂಬರುವ ಸಾಮಾಜಿಕ, ಆರ್ಥಿಕ ಸಮೀಕ್ಷೆ (ಜಾತಿ ಜನಗಣತಿ) ಕುರಿತು ನಗರ ಹೊರವಲಯದ ರತ್ನ ಕನ್ವೆನ್ಷನ್ ಸಭಾಂಗಣದಲ್ಲಿ ಒಕ್ಕಲಿಗ ಸಮುದಾಯಕ್ಕೆ ಅರಿವು ಮೂಡಿಸಲು ಆದಿಚುಂಚನಗಿರಿ ಮಠ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು,
ಸಮುದಾಯದ ಯಾವುದೇ ಉಪಪಂಗಡಕ್ಕೆ ಸೇರಿದ್ದರೂ ಜಾತಿ ಕಲಂನಲ್ಲಿ 'ಒಕ್ಕಲಿಗ' ಎಂದೇ ನಮೂದಿಸಿ. ಉಪಪಂಗಡಗಳನ್ನು ಉಪಜಾತಿ ಕಾಲಂನಲ್ಲಿ ದಾಖಲಿಸಬೇಕು. ಜಾತಿ ಕಾಲಂನಲ್ಲಿ ಉಪಜಾತಿ ನಮೂದಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು.
PublicNext
09/09/2025 05:16 pm