ಧಾರವಾಡ : ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಕಮಲಾಪುರದ ನಿವಾಸಿಯಾಗಿದ್ದ ದಿನೇಶ್ ವಾಡ್ಕರ್ ಎಂಬುವವರೇ ಸಾವನ್ನಪ್ಪಿದ ಕಾನ್ಸ್‌ಟೇಬಲ್ .
ಕಳೆದ ಕೆಲ ದಿನಗಳ ಹಿಂದೆ ಧಾರವಾಡದ ಜೆಎಸ್‌ಎಸ್ ಕಾಲೇಜು ಬಳಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಘಟನೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ದಿನೇಶ್ ಗಂಭೀರವಾಗಿ ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಧಾರವಾಡ ಸಂಚಾರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/09/2025 06:07 pm