ಚಿಕ್ಕಮಗಳೂರು : ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಹೇಳಿದರು.
ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕುರಿತ ಜಿಲ್ಲಾ ಮಟ್ಟದ ಸಂಘ ಸಂಸ್ಥೆಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ ವಲಸೆಗಾರರು, ಪಡಿತರ ಚೀಟಿ ಇಲ್ಲದವರು, ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಯಾವುದೇ ಕುಟುಂಬದವರಿದ್ದರೂ ಅಂತವರೂ ಕೂಡ ಸಮೀಕ್ಷೆಗೆ ಒಳಪಡಲಿದ್ದಾರೆ.
ಆಧಾರ ಕಾರ್ಡ್ ಹೊಂದಿದ್ದ ಬೇರೆ ರಾಜ್ಯ ಬೇರೆ ಜಿಲ್ಲೆಯ ಕುಟುಂಬದವರು ನಮ್ಮ ಜಿಲ್ಲೆಯಲ್ಲಿ ವಾಸಿಸುತ್ತಿದ್ದರೆ ಅಂತವರನ್ನು ಸಮೀಕ್ಷೆಗೆ ಒಳಪಡಿಸಿ ಅವರು ಈ ಮನೆಯಲ್ಲಿ ವಾಸವಿರುವ ಬಗ್ಗೆ ಗುರುತಿಸಲಾಗುತ್ತದೆ ಎಂದ ಅವರು ಮನೆ-ಮನೆ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಿ ಆಕ್ಟೋಬರ್ 7 ರವೆರೆಗ ನಡೆಯುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಮೀಕ್ಷೆಗೆ ಒಳಪಡುವ ವಿದ್ಯುತ್ ಮೀಟರ್‌ನ ಆರ್.ಆರ್ ಸಂಖ್ಯೆ ಇರುವ 2,31,740 ಕುಟುಂಬಗಳಿದ್ದು, 2,668 ಸಮೀಕ್ಷೆದಾರರು ಸಮೀಕ್ಷ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮೊಬೈಲ್ ಆಪ್ ಮುಖಾಂತರ ಸಮೀಕ್ಷೆಯ ದತ್ತಾಂಶಗಳನ್ನು ಸಂಗ್ರಹಿಸಲಾಗುವುದು ಎಂದು ಹೇಳಿದರು.
PublicNext
09/09/2025 06:34 pm