ಬೆಂಗಳೂರು: ಇಂದು ಆಡಳಿತ ಪಕ್ಷದ ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
PublicNext
09/09/2025 07:05 pm