ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೋರ್ನ್‌ ಸೈಟ್‌ಗಳಲ್ಲಿ ತನ್ನ ಫೋಟೋಗಳ ಬಳಕೆ - ಹೈಕೋರ್ಟ್ ಮೆಟ್ಟಿಲೇರಿದ ನಟಿ ಐಶ್ವರ್ಯಾ ರೈ

ನವದೆಹಲಿ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ತಮ್ಮ ವ್ಯಕ್ತಿತ್ವ ಮತ್ತು ಪ್ರಚಾರದ ಹಕ್ಕುಗಳನ್ನು ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಅನೇಕ ವೆಬ್‌ಸೈಟ್‌ಗಳು ತಮ್ಮ ಅನುಮತಿಯಿಲ್ಲದೆ ತಮ್ಮ ಹೆಸರನ್ನು ಬಳಸಿ ಸರಕುಗಳನ್ನು ಮಾರಾಟ ಮಾಡುತ್ತಿವೆ ಮತ್ತು ಕೃತಕ ಬುದ್ಧಿಮತ್ತೆ (AI)ನಿಂದ ಮಾರ್ಫ್ ಮಾಡಿದ ಫೋಟೊಗಳನ್ನು ಪ್ರಸಾರ ಮಾಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ನ್ಯಾಯಮೂರ್ತಿ ತೇಜಸ್ ಕರಿಯಾ ಅವರು, ಈ ಸಂಬಂಧ ಎಚ್ಚರಿಕೆ ನೀಡುವ ಮಧ್ಯಂತರ ಆದೇಶವನ್ನು ಹೊರಡಿಸುವುದಾಗಿ ಮೌಖಿಕವಾಗಿ ಸುಳಿವು ನೀಡಿದ್ದಾರೆ.

ಐಶ್ವರ್ಯಾ ರೈ ಪರವಾಗಿ ಹಾಜರಾದ ಹಿರಿಯ ವಕೀಲ ಸಂದೀಪ್ ಸೇಥಿ, ನಟಿ ತಮ್ಮ ಪ್ರಚಾರ ಮತ್ತು ವ್ಯಕ್ತಿತ್ವ ಹಕ್ಕುಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕೆಲವು ಸಂಪೂರ್ಣವಾಗಿ ಅವಾಸ್ತವಿಕ ಅಶ್ಲೀಲ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ವಾದಿಸಿದ್ದಾರೆ.

ರೈ ಅವರ ಫೋಟೋಗಳು, ವ್ಯಕ್ತಿತ್ವವನ್ನು ಬಳಸಿಕೊಳ್ಳಲು ಯಾರಿಗೂ ಯಾವುದೇ ಹಕ್ಕಿಲ್ಲ. ಚಿತ್ರವನ್ನು ಮಾರ್ಫ್ ಮಾಡಿ ಅವರ ಮುಖ ಮತ್ತು ಹೆಸರನ್ನು ಬಳಸಿ ಲಾಭ ಮಾಡಿಕೊಳ್ಳಲಾಗುತ್ತಿದೆ ಎಂದೂ ವಾದಿಸಿದ್ದಾರೆ.

‘ಅವರ ಹೆಸರು ಮತ್ತು ಹೋಲಿಕೆಯನ್ನು ಬಳಸಿ ಯಾರದ್ದೋ ಲೈಂಗಿಕ ಆಸೆಗಳನ್ನು ಪೂರೈಸಲಾಗುತ್ತಿದೆ. ಇದು ದುರದೃಷ್ಟಕರ’ಎಂದು ಅವರು ಹೇಳಿದ್ದಾರೆ.

Edited By : Vijay Kumar
PublicNext

PublicNext

09/09/2025 07:11 pm

Cinque Terre

25.02 K

Cinque Terre

1