ಬೆಂಗಳೂರು : ಉತ್ತರ ಮಹಾನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವಿವಿಧ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಈ ವೇಳೆ ಸಾರ್ವಜನಿಕ ಮೂಲಭೂತ ಸೌಕರ್ಯ, ರಸ್ತೆ ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಕೊಡಿಗೇಹಳ್ಳಿ ಗೇಟ್ ಸಿಗ್ನಲ್ ಜಂಕ್ಷನ್ ಅನ್ನು ಪರಿಶೀಲಿಸಿ, ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಜಂಕ್ಷನ್ ಅಗಲೀಕರಣ ಕೆಲಸವನ್ನು ಆರಂಭಿಸಲು ಸೂಚನೆ ನೀಡಿದರು.
PublicNext
09/09/2025 07:43 pm