ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆಯುತ್ತಿರುವ ಡಿಸಿಸಿ ಬ್ಯಾಂಕ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಸಚಿವ ಸತೀಶ ಜಾರಕಿಹೊಳಿ ಹಾಗೂ ಕತ್ತಿ ಕುಟುಂಬ ಪರಸ್ಪರ ಪ್ರತಿಷ್ಠೆಯ ಕಾಳಗಕ್ಕೆ ಇಳಿದಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಸಚಿವ ಸತೀಶ ಜಾರಕಿಹೊಳಿ ಮಾಧ್ಯಮಗಳ ಮುಂದೆ, “ನಾವು ಆಕ್ಟರ್ ಅಷ್ಟೇ, ಡೈರೆಕ್ಟರ್ ಹಾಗೂ ಪ್ರೊಡ್ಯೂಸರ್ ಗೋಕಾಕ್ ನಿಪ್ಪಾಣಿಯಲ್ಲಿದ್ದಾರೆ” ಎಂದು ಹೇಳಿದ್ದರು. ಈ ಹೇಳಿಕೆ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ, “ಗೋಕಾಕ್ ರಾಜಕೀಯವನ್ನು ಹುಕ್ಕೇರಿಯಲ್ಲಿ ನಡೆಸುತ್ತಿದ್ದಾರೆ. ಹುಕ್ಕೇರಿಯ ಜನರೇ ಇವರಿಗೆ ಸೂಕ್ತ ಉತ್ತರ ನೀಡುತ್ತಾರೆ” ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಪ್ರಸ್ತುತ್ ಹುಕ್ಕೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸತೀಶ ಜಾರಕಿಹೊಳಿ ಬಿರುಸಿನ ಪ್ರಚಾರ ನಡೆಸುತ್ತಿರುವಾಗ, ಶಾಸಕ ನಿಖಿಲ್ ಕತ್ತಿಯ ಪ್ರತಿಕ್ರಿಯೆ ಚುನಾವಣಾ ರಂಗಕ್ಕೆ ಇನ್ನಷ್ಟು ಕಾವೇರಿಸಿದೆ.
ರಾಜಕೀಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಕಸರತ್ತು ನಡೆಯುವ ಸಾಧ್ಯತೆ ತೀವ್ರವಾಗಿದೆ.
PublicNext
09/09/2025 07:44 pm